ಹೊಸದಿಗಂತ ಡಿಜಿಟಲ್ ಡೆಸ್ಕ್:
ಪಿ ಎಸ್ ಐ ಹುದ್ದೆ ನೇಮಕಾತಿ ಪರೀಕ್ಷೆ ಅಕ್ರಮಕ್ಕೆ ಸಂಬಂಧಿಸಿ ಸಿಐಡಿ ಪೊಲೀಸರು ಮತ್ತೋರ್ವ ಪೊಲೀಸ್ ಸಿಬ್ಬಂದಿಯನ್ನು ಬಂಧಿಸಿದ್ದಾರೆ.
ಯಶವಂತ್ ದೀಪ್ ಸಿಐಡಿ ಪೊಲೀಸರಿಂದ ಬಂಧನಕ್ಕೀಡಾದ ಆರೋಪಿ. ಯಶವಂತ್ ದೀಪ್ ವಿರುದ್ಧ ಹೈಗ್ರೌಂಡ್ಸ್ ಠಾಣೆಯಲ್ಲಿ ಎಫ್ ಐ ಆರ್ ದಾಖಲಾಗಿತ್ತು.
ಇನ್ನು ಪಿ ಎಸ್ ಐ ನೇಮಕಾತಿ ಅಕ್ರಮ ಪ್ರಕರಣ ಸಂಬಂಧ ಒಟ್ಟು 22 ಅಭ್ಯರ್ಥಿಗಳ ವಿರುದ್ಧ ಎಫ್ ಐ ಆರ್ ದಾಖಲಾಗಿದೆ.