ಪಿಎಸ್‌ಐ ನೇಮಕಾತಿ ಪರೀಕ್ಷೆ ಅಕ್ರಮ: ಸಿಐಡಿಯಿಂದ ಮತ್ತೊಬ್ಬ ಪ್ರಮುಖ ಆರೋಪಿ ಅರೆಸ್ಟ್

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಪಿಎಸ್‌ಐ ನೇಮಕಾತಿ ಪರೀಕ್ಷೆ ಅಕ್ರಮ ಸಂಬಂಧಿಸಿ ಸಿಐಡಿ ಪೊಲೀಸರು ಮತ್ತೊಬ್ಬ ಪ್ರಮುಖ ಆರೋಪಿಯನ್ನು ಬಂಧಿಸಿದ್ದಾರೆ.
ಪೊಲೀಸ್ ಸಬ್ ಇನ್ಸ್ ಪೆಕ್ಟರ್ ನೇಮಕಾತಿ ಪರೀಕ್ಷೆಯಲ್ಲಿನ ಅಕ್ರಮ ಸಂಬಂಧ ಈಗಾಗಲೇ ಹಲವರನ್ನು ಸಿಐಡಿ ಬಂಧಿಸಿದೆ. ಈಗ ಮುಂದುವರೆದು ಹಲವು ಅಭ್ಯರ್ಥಿಗಳಿಗೆ ಅಕ್ರಮ ನಡೆಸೋದಕ್ಕೆ ಏಜೆಂಟ್ ಆಗಿ ಕೆಲಸ ಮಾಡಿದ್ದಂತ ಕಾಮಾಕ್ಷಿಪಾಳ್ಯ ಠಾಣೆಯ ಪಿಎಸ್‌ಐ ಷರೀಫ್ ಕಲಿಮಠ್ ಬಂಧನಕ್ಕೂ ಸಿಐಡಿ ಬಲೆ ಬೀಸಿದ್ದರು.
ತಮ್ಮ ಬಂಧನವನ್ನು ಅರಿತಂತ ಪಿಎಸ್‌ಐ ಷರೀಫ್, ಮುಂಬೈಗೆ ತೆರಳಿ ತಲೆಮರೆಸಿಕೊಂಡಿದ್ದರು. ಇದೀಗ ಅವರನ್ನು ಪತ್ತೆ ಹಚ್ಚಿ ಸಿಐಡಿ ಪೊಲೀಸರು ಬಂಧಿಸಿದ್ದಾರೆ.
ಇಂದು ನಗರದ 1ನೇ ಎಸಿಎಂಎಂ ಕೋರ್ಟ್ ನ ನ್ಯಾಯಾಧೀಶರ ಮುಂದೆ ಅವರನ್ನು ಹಾಜರುಪಡಿಸಲಾಗಿತ್ತು. ನ್ಯಾಯಾಲಯವು ಆಗಸ್ಟ್ 8ರವರೆಗೆ 10 ದಿನಗಳ ಕಾಲ ಸಿಐಡಿ ವಶಕ್ಕೆ ನೀಡಿ ಆದೇಶಿಸಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!