ಹೊಸದಿಗಂತ ವರದಿ ಕಲಬುರಗಿ:
ಪಿಎಸ್ಐ ನೇಮಕಾತಿ ಪರೀಕ್ಷೆ ಅಕ್ರಮದ ಪ್ರಮುಖ ಆರೋಪಿ, ಕಿಂಗ್ ಪಿನ್ ಆರ್.ಡಿ.ಪಾಟೀಲ್ಗೆ ಸಿಐಡಿ ನೋಟಿಸ್ ಜಾರಿ ಮಾಡಿದ್ದು, ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನಲ್ಲಿ ಆದೇಶಿಸಲಾಗಿದೆ.
ಈ ಹಿಂದೆ ನೋಟಿಸ್ ನೀಡಿ ವಿಚಾರಣೆಗೆ ಹಾಜರಾಗಲು ಸೂಚಿಸಿದ್ದರು, ಆರೋಪಿ ಆರ್.ಡಿ.ಪಾಟೀಲ್ ವಿಚಾರಣೆಗೆ ಗೈರಾಗಿದ್ದನು. ಇದೀಗ ಮತ್ತೋಂದು ನೋಟಿಸ್ ಜಾರಿ ಮಾಡಿ, ಜನವರಿ 23 ನಾಳೆ ಸೋಮವಾರ ಸಿಐಡಿ ಅಧಿಕಾರಿಗಳ ಮುಂದೆ ಹಾಜರಾಗಲು ಸೂಚನೆ ನೀಡಿದೆ.
ಮೊನ್ನೆಯಷ್ಟೇ ಸಿಐಡಿ ಅಧಿಕಾರಿಗಳನ್ನು ತಳ್ಳಿ, ಪರಾಯಾಗಿದ್ದನು. ಹಾಗೂ ನಿನ್ನೆ ಅಜ್ಞಾತ ಸ್ಥಳದಿಂದ ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ಮಾಡಿ, ಈ ನೆಲದ ಕಾನೂನಿಗೆ ಗೌರವ ಕೊಡುವುದಾಗಿ ಹೇಳಿಕೆ ನೀಡಿದ್ದನು.
ಅದೇ ಮಾತಿನಂತೆ, ನೆಲದ ಕಾನೂನಿಗೆ ಗೌರವ ಕೊಡುವ ಆರ್.ಡಿ.ಪಾಟೀಲ್ ವಿಚಾರಣೆಗೆ ಹಾಜರಾಗುವಂತೆ ಸಿಐಡಿ ಅಧಿಕಾರಿಗಳು ನೋಟಿಸ್ ನಲ್ಲಿ ಉಲ್ಲೇಖ ಮಾಡಿದ್ದಾರೆ.