ಹೊಸದಿಗಂತ ವರದಿ, ಕಲಬುರಗಿ:
ಪಿಎಸ್ ಐ ನೇಮಕಾತಿ ಪರೀಕ್ಷೆ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿ ಪೊಲೀಸರು, ಧಾರವಾಡ ಜಿಲ್ಲಾ ಪೊಲೀಸ್ ತರಬೇತಿ ಕೇಂದ್ರದಲ್ಲಿ ಕಾನ್ಸ್ಟೇಬಲ್ ಆಗಿದ್ದ ಇಸ್ಮಾಯಿಲ್ ಜಮಾದರ ನನ್ನು ಬಂಧಿಸಿದ್ದಾರೆ.
ಮಹಾರಾಷ್ಟ್ರದ ಪುಣೆಯಲ್ಲಿ ಇಸ್ಮಾಯಿಲ್ ಜಮಾದಾರ್ ನನ್ನು ಬಂಧಿಸಲಾಗಿದೆ. ಗುರುವಾರ ವಷ್ಟೇ ಅವರ ಸೋದರ ಸೈಫನ ಜಮಾದರನನ್ನು ಸಿಐಡಿ ಅಧಿಕಾರಿಗಳು ಬಂಧಿಸಿದರು.
ಇಸ್ಮಾಯಿಲ್ ಜಮಾದರ ಪಿಎಸ್ಐ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮವಾಗಿ ಬರೆದು ಪಾಸಾಗಿದ. ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿ ಅಧಿಕಾರಿಗಳು ಇನ್ನಷ್ಟು ತನಿಖೆ ನಡೆಸುತ್ತಿದ್ದಾರೆ.
ಇನ್ನೊಂದು ಕಡೆ ಅಕ್ರಮದಲ್ಲಿ ಭಾಗಿಯಾಗಿದ್ದ ಆರೋಪಿಗಳು ಜಾಮೀನಿಗೆ ಅರ್ಜಿ ಸಲ್ಲಿಸುತ್ತಿದ್ದಾರೆ.ಆದರೆ ಇಲ್ಲಿಯವರೆಗೆ ಯಾರೊಬ್ಬರಿಗೂ ಜಾಮೀನು ಆಗಿರುವುದಿಲ್ಲ.