ಪಿಎಸ್ಐ ನೇಮಕಾತಿ ಅಕ್ರಮ ಪ್ರಕರಣ: ನ್ಯಾಯಾಲಯಕ್ಕೆ ಚಾರ್ಜ್​ಶೀಟ್​ ಸಲ್ಲಿಸಿದ ಸಿಐಡಿ

ಹೊಸ ದಿಗಂತ ವರದಿ, ಕಲಬುರಗಿ:

ಪಿಎಸ್ಐ ನೇಮಕಾತಿ ಪರೀಕ್ಷಾ ನೇಮಕಾತಿ ಅಕ್ರಮ ಪ್ರಕರಣದ ಚಾರ್ಜ್​ಶೀಟ್​ನ್ನು ಸಿಐಡಿ ಕೋರ್ಟ್​ಗೆ ಸಲ್ಲಿಸಿದೆ. ಸಿಐಡಿ ತಂಡ ಸುದೀರ್ಘ ತನಿಖೆ ಕೈಗೊಂಡ ಬಳಿಕ ಮಂಗಳವಾರ 2 ಸಾವಿರ ಪುಟಗಳ ಚಾರ್ಜ್‌ಸೀಟ್​ ಸಿಐಡಿ ಅಧಿಕಾರಿಗಳು ಕಲಬುರಗಿಯ ಮೂರನೇ ಜೆಎಂಎಫ್‌ಸಿ ನ್ಯಾಯಾಲಯಕ್ಕೆ ಸಲ್ಲಿಸಿದ್ದಾರೆ.
ಪಿಎಸ್ಐ ಪರೀಕ್ಷೆ ಅಕ್ರಮ ಸಂಬಂಧ ಈಗಾಗಲೇ ಅಕ್ರಮದ ಕೇಂದ್ರಸ್ಥಾನ ಜ್ಞಾನಜ್ಯೋತಿ ಶಾಲೆಯ ಒಡತಿ ದಿವ್ಯಾ ಹಾಗರಗಿ ಆಕೆಯ ಪತಿ ರಾಜೇಶ್​ ಹಾಗೂ ಹಿರಿಯ ಪೊಲೀಸ್ ಅಧಿಕಾರಿಗಳು, ಸಿಬ್ಬಂದಿ ಸೇರಿ ಒಟ್ಟು 34 ಜನರನ್ನು ಸಿಐಡಿ ಬಂಧಿಸಿ ಜೈಲಿಗೆ ತಳ್ಳಿದ್ದಾರೆ. ಬಂಧಿತ ಆರೋಪಿಗಳನ್ನ ಸುದೀರ್ಘವಾಗಿ ವಿಚಾರಣೆಗೆ ಒಳಪಡಿಸಿದ ಸಿಐಡಿ ತಂಡ ಆರೋಪಿಗಳ ವಿರುದ್ಧ ಸಿದ್ಧಪಡಿಸಿದ ಚಾರ್ಜ್‌ಸೀಟ್ಅನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!