ಪಿಎಸ್ಐ ನೇಮಕಾತಿ ಅಕ್ರಮ, ಬಿಜೆಪಿ ಮುಖಂಡೆ ದಿವ್ಯಾ ಹಾಗರಗಿ ಮನೆಗೆ ಸಿಐಡಿ

ಹೊಸದಿಗಂತ ವರದಿ ಕಲಬುರಗಿ: 

ಪೊಲೀಸ್ ಸಬ್ ಇನ್ಸಪೆಕ್ಟರ್ (ಪಿಎಸ್ಐ) ನೇಮಕಾತಿ ಅಕ್ರಮ ಕುರಿತಾಗಿ ಸಿಐಡಿ ತನಿಖೆ ಚುರುಕುಗೊಂಡಿದೆ. ಈಗಾಗಲೇ ಹಲವರನ್ನು ಬಂಧಿಸಿದ ಪೊಲೀಸರು ಇಂದು ಕಲಬುರಗಿ ಜಿಲ್ಲಾ ಬಿಜೆಪಿ ಮಹಿಳಾ ಮುಖಂಡೆ ದಿವ್ಯಾ ಹಾಗರಗಿ ಮನೆಗೆ ದಾಳಿ ನಡೆಸಿ ತಪಾಸಣೆಗೆ ಮುಂದಾಗಿದ್ದಾರೆ.

ರಾಜ್ಯದಲ್ಲಿ 545 ಪಿಎಸ್ಐ ಹುದ್ದೆ ನೇಮಕಾತಿಯಲ್ಲಿ ಬಾರಿ ಅಕ್ರಮ‌ ನಡೆದಿದೆ ಎಂಬ ಆರೋಪ ಇರುವ ಕಾರಣಕ್ಕೆ ಸಿಐಡಿ ತನಿಖೆ ನಡೆಸುತ್ತಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಸಿಐಡಿ ಡಿವೈಎಸ್ಪಿ ಶಂಕರಗೌಡ ನೇತೃತ್ವದ ತಂಡ ಕಲಬುರಗಿಯ ಹಳೆ ಜೇವರ್ಗಿ ರಸ್ತೆಯಲ್ಲಿರೋ ಬಿಜೆಪಿ ಮುಖಂಡೆ ಹಾಗೂ ಹಿಂದೂಪರ ಕಾರ್ಯಕರ್ತೆ ದಿವ್ಯಾ ಹಾಗರಗಿ ಮನೆಗೆ ತಪಾಸಣೆಗೆ ಆಗಮಿಸಿದೆ.

ದಿವ್ಯಾ ಹಾಗರಗಿಗೆ ಸೇರಿದ್ದ ಜ್ಞಾನಜೋತಿ ಇಂಗ್ಲಿಷ್ ಮೀಡಿಯಂ ಶಾಲೆಯಲ್ಲಿ ಪರೀಕ್ಷಾ ಅಕ್ರಮ ನಡೆದಿತ್ತು. ಇದೇ ಶಾಲೆಯ ಮೂವರು ಮಹಿಳಾ ಕೊಠಡಿ ಮೇಲ್ವಿಚಾರಕರು, ಇದೇ ಶಾಲೆಯ ಪರೀಕ್ಷಾ ಕೇಂದ್ರದಲ್ಲಿ ಪರೀಕ್ಷೆ ಬರೆದಿದ್ದ ನಾಲ್ವರು ಅಭ್ಯರ್ಥಿಗಳು ಸೇರಿ ಒಟ್ಟು ಏಳು ಜನರನ್ನು ಈಗಾಗಲೇ ಸಿಐಡಿ ತಂಡ ಬಂಧಿಸಿದೆ. ದಿವ್ಯಾ ಹಾಗರಗಿಗೆ ಶಾಲೆ ಸೇರಿದ್ದರಿಂದ ಇಂದು ಭಾನುವಾರ ಅವರ ಮನೆಗೆ ಸಿಐಡಿ ತಂಡ ದಾಳಿ ನಡೆಸಿದೆ.

ಆದರೆ, ಕಳೆದ ಮೂರ್ನಾಲ್ಕು ದಿನಗಳಿಂದ ದಿವ್ಯಾ ಹಾಗರಗಿ ನಾಪತ್ತೆಯಾಗಿದ್ದಾರೆ. ಸಿಐಡಿ ತಂಡ ದಿವ್ಯಾ ಹಾಗರಗಿ ಪತಿ ರಾಜೇಶ್‌ನನ್ನು ವಿಚಾರಣೆ ನಡೆಸುತ್ತಿದ್ದಾರೆ. ದಿವ್ಯಾ ಹಾಗರಗಿ ವಿಜಯಪುರ ಕ್ಕೆ ಹೋಗಿದ್ದಾರೆ ಎಂದು ದಿವ್ಯಾ ಹಾಗರಗಿ ಗಂಡನಾದ ರಾಜೇಶ್ ಸಿಐಡಿ ತಂಡಕ್ಕೆ ಮಾಹಿತಿ ನೀಡಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!