ಹೊಸದಿಗಂತ ವರದಿ,ಕಲಬುರಗಿ:
ಪಿಎಸ್ಐ ನೇಮಕಾತಿ ಪರೀಕ್ಷೆ ಅಕ್ರಮಕ್ಕೆ ಸಂಬಂಧಿಸಿದಂತೆ ಬ್ಲೂಟೂತ್ ಕಿಂಗ್ ಪಿನ್ ಆರ್.ಡಿ.ಪಾಟೀಲ್, ಗೆ ಮತ್ತೆ ನಾಲ್ಕು ದಿನಗಳ ಕಾಲ ಸಿಐಡಿ ಕಸ್ಟಡಿಗೆ ನೀಡಲಾಗಿದೆ.
7 ದಿನಗಳ ಕಾಲ ಆರ್.ಡಿ.ಪಾಟೀಲ್ ಅವರನ್ನು ಸಿಐಡಿ ಕಸ್ಟಡಿ ಈ ಹಿಂದೆ ನೀಡಲಾಗಿತ್ತು. ಇದೀಗ 7 ದಿನಗಳ ಸಿಐಡಿ ಕಸ್ಟಡಿ ಜೂನ್ 2ಕ್ಕೆ ಅಂತ್ಯವಾಗುವ ಹಿನ್ನೆಲೆಯಲ್ಲಿ , ಸೋಮವಾರ ನ್ಯಾಯಾಲಯದ ಮುಂದೆ ಹಾಜರುಪಡಿಸಿ, ಹೆಚ್ಚಿನ ವಿಚಾರಣೆಗಾಗಿ ಸಿಐಡಿ ಮನವಿ ಮಾಡಿದ್ದರು.
ಮನವಿಗೆ ಸ್ಪಂದಿಸುವ ಮೂಲಕ ಕಲಬುರಗಿ ಮೂರನೇ ಜೆಎಮ್ಎಫ್ಸಿ ನ್ಯಾಯಾಲಯವು ಮತ್ತೆ ನಾಲ್ಕು ದಿನಗಳ ಕಾಲ ಆರ್.ಡಿ.ಪಾಟೀಲ್ ಅವರನ್ನು ಸಿಐಡಿ ಕಸ್ಟಡಿಗೆ ನೀಡಿ ಆದೇಶ ಹೊರಡಿಸಿದೆ.