Monday, June 27, 2022

Latest Posts

ಪಿಎಸ್ಐ ನೇಮಕಾತಿ ಅಕ್ರಮ: ರಾಜೇಶ್ ಹಾಗಾರಗಿ ಜಾಮೀನು ಅರ್ಜಿ ತಿರಸ್ಕಾರ

ಹೊಸದಿಗಂತ ವರದಿ, ಕಲಬುರಗಿ:

ಪಿಎಸ್ಐ ಅಕ್ರಮ ನೇಮಕಾತಿ ಹಗರಣದಲ್ಲಿ ಭಾಗಿಯಾದ ಆರೋಪದಲ್ಲಿ ಬಂಧಿತರಾಗಿರುವ ಜ್ಞಾನಜ್ಯೋತಿ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ರಾಜೇಶ್ ಹಾಗರಗಿ ಜಾಮೀನು ಅರ್ಜಿಯನ್ನು ಹೈಕೋರ್ಟ್ ಕಲಬುರಗಿ ಪೀಠ ತಿರಸ್ಕರಿಸಿದೆ.

ಬುಧವಾರ ನ್ಯಾಯಮೂರ್ತಿ ಎಂ.ಜಿ. ಉಮಾ ಅವರಿದ್ದ ‌ನ್ಯಾಯಪೀಠವು ಜಾಮೀನು ಅರ್ಜಿಯ ವಿಚಾರಣೆ ನಡೆಸಿತ್ತು. ವಿಚಾರಣೆ ವೇಳೆ ರಾಜೇಶ್ ಅಕ್ರಮ ನಡೆದ ಪರೀಕ್ಷಾ ಕೇಂದ್ರವಿದ್ದ ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾಗಿದ್ದರಿಂದ ಅವರಿಗೆ ಜಾಮೀನು ನೀಡುವುದು ಸೂಕ್ತವಲ್ಲ ಎಂದು
ಸಿಐಡಿ ಪರವಾಗಿ ‌ಹಾಜರಾಗಿದ್ದ ಹೆಚ್ಚುವರಿ ವಿಶೇಷ ಸರ್ಕಾರಿ ‌ಅಭಿಯೋಜಕ ಪ್ರಕಾಶ ಎಲಿ ಅವರು ವಾದ ಮಂಡಿಸಿದರು, ಇದನ್ನು ಪುರಸ್ಕರಿಸಿದ ನ್ಯಾಯಪೀಠ ರಾಜೇಶ್ ಹಾಗರಗಿ ಅರ್ಜಿಯನ್ನು ವಜಾ ಮಾಡಿತು.

ಅಲ್ಲದೇ, ಇದೆ ಪ್ರಕರಣದಲ್ಲಿ ಜ್ಞಾನಜ್ಯೋತಿ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ದಿವ್ಯಾ ಹಾಗರಗಿಗೆ ಆಶ್ರಯ ನೀಡಿದ್ದ ಆರೋಪದಲ್ಲಿ ಬಂಧಿತನಾಗಿದ್ದ ಮಹಾರಾಷ್ಟ್ರದ ಸುರೇಶ ಕಾಟೇಗಾಂವಗೆ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.
ಕೆಲ ದಿನಗಳ ಹಿಂದೆ ಸುರೇಶ ಕಾಟೇಗಾಂವ ಹಾಗೂ ‌ರಾಜೇಶ್ ಹಾಗರಗಿ ಜಾಮೀನಿಗಾಗಿ ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ನ್ಯಾಯಾಲಯ ಇಬ್ಬರ ಅರ್ಜಿಯನ್ನೂ ತಿರಸ್ಕರಿಸಿದ್ದರಿಂದ ಹೈಕೋರ್ಟ್ ಮೊರೆ ಹೋಗಿದ್ದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_img
spot_img
spot_img
spot_img

Don't Miss