ಪಿಎಸ್ಐ ನೇಮಕಾತಿ ಅಕ್ರಮ: ಸಿಐಡಿ ಡಿವೈಎಸ್ಪಿ 76 ಲಕ್ಷ ನೀಡಿರುವುದಾಗಿ ಲೋಕಾಯುಕ್ತಕ್ಕೆ ದೂರು ಕೊಟ್ಟ ಆರ್.ಡಿ.ಪಿ.

ಹೊಸದಿಗಂತ ವರದಿ,ಕಲಬುರಗಿ:

ಪಿಎಸ್ಐ ಅಕ್ರಮ ನೇಮಕಾತಿ ಪ್ರಕರಣದಿಂದ ಪಾರು ಮಾಡಲು ತಾನು ಸಿಐಡಿ ಡಿವೈಎಸ್ಪಿ ಶಂಕರಗೌಡ ಪಾಟೀಲ ಅವರಿಗೆ ₹ 76 ಲಕ್ಷ ನೀಡಿರುವುದಾಗಿ ಪ್ರಕರಣದ ಪ್ರಮುಖ ಆರೋಪಿ ಆರ್.ಡಿ. ಪಾಟೀಲ ಕರ್ನಾಟಕ ಲೋಕಾಯುಕ್ತರಿಗೆ ದೂರು ನೀಡಿದ್ದಾನೆ.

ದೂರಿನೊಂದಿಗೆ 8.4 ನಿಮಿಷ ಅವಧಿಯ ಆಡಿಯೊದ ಪೆನ್ ಡ್ರೈವ್ ದಾಖಲೆಯಾಗಿ ನೀಡಿದ್ದು, ಈ ಸಂಬಂದ ‘ಆರ್.ಡಿ. ಪಾಟೀಲ ಯುವ ಬ್ರಿಗೇಡ್’ ಹೆಸರಿನ ಫೇಸ್‌ಬುಕ್‌ ಮೇಲೆ ಪೇಜ್ ಮೂಲಕ ಪಾಟೀಲ ಮಾತನಾಡಿರುವ ಆಡಿಯೊ ಸೋಮವಾರ ರಾತ್ರಿ ಅಪ್ ಲೋಡ್ ಆಗಿದೆ.

ಶಂಕರಗೌಡ ಪಾಟೀಲ ಅವರು ಪ್ರಕರಣ ಮುಂದುವರೆಸದಿರಲು ನನಗೆ ₹ 3 ಕೋಟಿ ಹಣಕ್ಕೆ ಬೇಡಿಕೆ ಇಟ್ಟಿದ್ದರು. ಆದರೆ ನನ್ನಿಂದ ಅಷ್ಟು ಹಣ ಹೊಂದಿಸಲು ಸಾಧ್ಯವಾಗುವುದಿಲ್ಲ. ಬೇಕಿದ್ದರೆ 76 ಲಕ್ಷ ಹಣವನ್ನು ಕೊಡುತ್ತೇನೆ ಎಂದು ಹೇಳಿ ಬ್ಯಾಂಕ್ ಆಫ್ ಬರೋಡ ಶಾಖೆಯಿಂದ ಹಣ ಡ್ರಾ ಮಾಡಿಸಿಕೊಂಡು ನನ್ನ ಅಳಿಯ ಶ್ರೀಕಾಂತನ ಮೂಲಕ ಅವರಿಗೆ ತಲುಪಿಸಿದ್ದೆ. ನಾನು ಜಾಮೀನು ಪಡೆದು ಹೊರ ಬಂದ ಬಳಿಕವೂ ಶಂಕರಗೌಡ ಹಾಗೂ ಅವರ ಅಧೀನ ಸಿಬ್ಬಂದಿ‌ಯು ಮನೆಗೆ ಬಂದು ಉಳಿದ ಹಣ ನೀಡಿವಂತೆ ಕಿರುಕುಳ ನೀಡಿದ್ದಾರೆ’ ಎಂದು ಫೇಸ್‌ಬುಕ್‌ ವಿಡಿಯೊ ಹೇಳಿಕೆಯಲ್ಲಿ ತಿಳಿಸಿದ್ದಾನೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!