PSI ನೇಮಕಾತಿ ಹಗರಣ: ಹೆಚ್ಚಿನ ತನಿಖೆಗಾಗಿ ‘SIT’ ರಚನೆಗೆ ರಾಜ್ಯ ಸರ್ಕಾರ ನಿರ್ಧಾರ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಪಿಎಸ್‌ಐ ( PSI) ಹಗರಣದ ತನಿಖೆಗೆ SIT ರಚಿಸಲು ರಾಜ್ಯ ಸಚಿವ ಸಂಪುಟ ನಿರ್ಧಾರ ಮಾಡಿದೆ.

ಸಂಪುಟ ಸಭೆ ಬಳಿಕ ಮಾತನಾಡಿದ ಕಂದಾಯ ಸಚಿವ ಕೃಷ್ಣಭೈರೇಗೌಡ , ಪಿಎಸ್‌ಐ ನೇಮಕಾತಿ ಸಂಬಂಧ ಬಿ ವೀರಪ್ಪ ಸಮಿತಿ ರಚಿಸಿದ್ದೆವು. ಸರ್ಕಾರಿ ಹಾಗೂ ಖಾಸಗಿ ವ್ಯಕ್ತಿಗಳು ಸೇರಿ 113 ವ್ಯಕ್ತಿಗಳು ಭಾಗಿಯಾಗಿದ್ದಾರೆ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ.
ಪ್ರಕರಣ ಸಂಬಂಧ ಎಸ್‌ಐಟಿ ಹೆಚ್ಚಿಸಬೇಕೆಂದು ನ್ಯಾ. ಬಿ ವಿರಪ್ಪ ಹೇಳಿದ್ದಾರೆ ಹಾಗಾಗಿ ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಚ್ಚುವರಿ ತನಿಖೆಗಾಗಿ ತೀರ್ಮಾನ ಮಾಡಿದ್ದೇವೆ ಎಂದು ಹೇಳಿದ್ದಾರೆ.

ಪಿಎಸ್‌ಐ ಅಕ್ರಮ ನೇಮಕಾತಿ ಪ್ರಕರಣ ರಾಜ್ಯದಲ್ಲಿ ಭಾರಿ ಸದ್ದು ಮಾಡಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ಹಲವರನ್ನು ಬಂಧಿಸಲಾಗಿತ್ತು. 2023ರ ಅಕ್ಟೋಬರ್ನಲ್ಲಿ ಪಿಎಸ್‌ಐ ನೇಮಕಾತಿ ಪರೀಕ್ಷೆ ನಡೆದಿತ್ತು. ಪರೀಕ್ಷೆಯಲ್ಲಿ ಭಾರಿ ಪ್ರಮಾಣದ ಅಕ್ರಮ ನಡೆದಿರುವುದು ಕೆಲವು ದಿನಗಳ ಬಳಿಕ ಬಹಿರಂಗವಾಗಿತ್ತು. ತನಿಖೆ ನಡೆಸಿದ್ದ ಸಿಐಡಿ ಪೊಲೀಸರು, 110 ಜನರನ್ನು ಬಂಧಿಸಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!