ಪಿಎಸ್‌ಐ ನೇಮಕಾತಿ ಹಗರಣ: ರಾಜಕೀಯ ನಾಯಕರಿಗೆ ಸಮನ್ಸ್ ಜಾರಿ

ಹೊಸದಿಗಂತ ಡಿಜಿಟಲ್ ಡೆಸ್ಕ್:
 
ಪಿಎಸ್‌ಐ ನೇಮಕಾತಿ ಪರೀಕ್ಷೆಯ ಹಗರಣ ಸಂಬಂಧ ರಾಜಕೀಯ ನಾಯಕರಾದ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ, ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸೇರಿದಂತೆ ವಿವಿಧ ನಾಯಕರಿಗೆ ಸಮನ್ಸ್ ಜಾರಿಯಾಗಿದೆ.

ರಾಜ್ಯ ಸರ್ಕಾರ ನ್ಯಾಯಮೂರ್ತಿ ಬಿ.ವೀರಪ್ಪ ಅವರ ನೇತೃತ್ವದಲ್ಲಿ ನ್ಯಾಯಾಂಗ ತನಿಖೆಗೆ ಆದೇಶಿಸಿತ್ತು. ಅದರಂತೆ ತನಿಖಾ ಆಯೋಗವು ಈ ಪ್ರಕರಣದಲ್ಲಿ ದೂರುದಾರರ ಮನವಿಯ ಹಿನ್ನಲೆಯಲ್ಲಿ ಸಮನ್ಸ್ ಜಾರಿ ಮಾಡಿದೆ.

ಈ ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಬಿ.ವೀರಪ್ಪ ಆಯೋಗದ ಮುಂದೆ ದೂರುದಾರರರು ರಾಜಕೀಯ ನಾಯಕರು ತಮ್ಮ ಬಳಿ ಪಿಎಸ್‌ಐ ನೇಮಕಾತಿ ಪರೀಕ್ಷೆ ಹಗರಣದ ಸಾಕ್ಷ್ಯಾಧಾರಗಳಿವೆ ಅಂತ ಹೇಳಿಕೊಂಡಿದ್ದಾರೆ. ಹೀಗಾಗಿ ಅವರಿಗೆ ಸಮನ್ಸ್ ಜಾರಿಗೊಳಿಸಿ, ಸಾಕ್ಷ್ಯಾಧಾರಗಳನ್ನು ಒದಗಿಸುವಂತೆ ಸೂಚಿಸೋದಕ್ಕೆ ಕೋರಿದ್ದರು.

ದೂರುದಾರರ ಮನವಿಯನ್ನು ಪುರಸ್ಕರಿಸಿದ ನ್ಯಾಯಮೂರ್ತಿ ಬಿ.ವೀರಪ್ಪ ಅವರ ತನಿಖಾ ಆಯೋಗವು ಇದೀಗ ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ, ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ಬಸವರಾಜ ದಡೇಸೂರು, ಮಾಜಿ ಡಿಸಿಎಂ ಡಾ.ಸಿಎನ್ ಅಶ್ವತ್ಥನಾರಾಯಣ, ಸತೀಶ್ ಜಾರಕಿಹೊಳಿ ಸೇರಿದಂತೆ ವಿವಿಧ ರಾಜಕೀಯ ನಾಯಕರಿಗೆ ಸಮನ್ಸ್ ಜಾರಿಗೊಳಿಸಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!