ಕೌಟುಂಬಿಕ ಕಲಹಕ್ಕೆ ಬೇಸತ್ತು ಮಹಿಳಾ ಪಿಎಸ್‌ಐ ಆತ್ಮಹತ್ಯೆ ಯತ್ನ

ಹೊಸದಿಗಂತ ವರದಿ ಮಂಗಳೂರು:

ನಗರದ ಪಣಂಬೂರು ನವಮಂಗಳೂರು ಬಂದರು ಪ್ರಾಧಿಕಾರ (ಎನ್‌ಎಂಪಿಎ)ದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆಯ ಮಹಿಳಾ ಪಿಎಸ್‌ಐ ಎನ್‌ಎಂಪಿಎ ಮುಖ್ಯ ಗೇಟ್ ಬಳಿ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಬುಧವಾರ ನಡೆದಿದೆ.

ಜ್ಯೋತಿ ಬಾಯಿ (33) ಆತ್ಮಹತ್ಯೆಗೆ ಯತ್ನಿಸಿದ ಮಹಿಳೆ. ಕೌಟುಂಬಿಕ ಕಲಹದಿಂದ ಮನನೊಂದು ಈಕೆ ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎನ್ನಲಾಗಿದೆ. ತನ್ನ ತಾಯಿಗೆ ಸೂಸೈಡ್ ನೋಟ್ ಬರೆದು ಆತ್ಮಹತ್ಯೆಗೆ ಯತ್ನಿಸಿರುವ ಬಗ್ಗೆ ಪ್ರಾಥಮಿಕ ಮಾಹಿತಿ ತಿಳಿದುಬಂದಿದೆ. ಜ್ಯೋತಿ ಬಾಯಿ ಅವರನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಇವರ ಪತಿ ಓಂಬೀರ್ ಸಿಂಗ್ ಪರ್ಮಾರ್ ಎಂಬವರು ಎಂಆರ್‌ಪಿಎಲ್ ನಲ್ಲಿ ಸಹಾಯಕ ಕಮಾಂಡೆಂಟ್ ಆಗಿ ಕೆಲಸ ಮಾಡುತ್ತಿದ್ದಾರೆ. ಇಬ್ಬರೂ ರಾಜಸ್ಥಾನದ ಭರತ್‌ಪುರ ಜಿಲ್ಲೆ ಸೇರಿದವರಾಗಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!