ಪಿಎಸ್ಐ ಪರೀಕ್ಷೆ ಹಗರಣದ ಕಿಂಗ್ ಪಿನ್ ಆರ್.ಡಿ. ಪಾಟೀಲ್ ನಿವಾಸದ ಮೇಲೆ ಇಡಿ ದಾಳಿ

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಪಿಎಸ್ ಐ ಪರೀಕ್ಷಾ ಹಗಣದ ಕಿಂಗ್ ಪಿನ್ ಆರ್. ಡಿ. ಪಾಟೀಲ್ ಅಲಿಯಾಸ್ ರುದ್ರಗೌಡ ಪಾಟೀಲ್ ಅವರ ಅಕ್ಕಮಹಾದೇವಿ ಬಡಾವಣೆಯಲ್ಲಿರುವ ಮನೆಯ ಮೇಲೆ ಆದಾಯ ಮತ್ತು ತೆರಿಗೆ ಇಲಾಖೆಯ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಎರಡು ತಂಡಗಳಲ್ಲಿ ಆಗಮಿಸಿದ ಅಧಿಕಾರಿಗಳು ಮನೆಯಲ್ಲಿ ತಪಾಸಣೆ ನಡೆಸಿದ್ದು, ಈ ವೇಳೆ ರುದ್ರಗೌಡ ಮನೆಯಲ್ಲಿದ್ದು ಅಧಿಕಾರಿಗಳಿಗೆ ಸಹಕಾರ ನೀಡುತ್ತಿದ್ದಾರೆಂಬ ಮೂಲಗಳು ಹೇಳಿವೆ.

ಹೈದರಾಬಾದ್ ನಿಂದ ಟಿಟಿ ವಾಹನ, ಇನ್ನೋವ ಕಾರಿನಲ್ಲಿ ಬಂದಿರುವಂತ ಇಡಿ ಅಧಿಕಾರಿಗಳು, ನೂರಾರು ಕೋಟಿ ಹಣ ವರ್ಗಾವಣೆ ಸಂಬಂಧ ಆರ್ ಡಿ ಪಾಟೀಲ್ ನಿವಾಸದಲ್ಲಿ ದಾಖಲೆಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!