ಮನೋವೈದ್ಯ ಚಂದ್ರಶೇಖರ್, ವೆಂಕಯ್ಯ ನಾಯ್ಡು, ಮಿಥುನ್ ಚಕ್ರವರ್ತಿ ಸಹಿತ ಹಲವರಿಗೆ ಪದ್ಮ ಪ್ರಶಸ್ತಿ ಪ್ರದಾನ

ಹೊಸದಿಗಂತ ಡಿಜಿಟಲ್ ಡೆಸ್ಕ್:

ರಾಷ್ಟ್ರಪತಿ ಭವನದಲ್ಲಿ ಇಂದು ನಡೆದ ಸಮಾರಂಭದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಸಾಧಕರಿಗೆ ಪದ್ಮ ಪ್ರಶಸ್ತಿಗಳನ್ನು ಪ್ರದಾನ ಮಾಡಿದರು.

ಕರ್ನಾಟಕದ ಪ್ರಸಿದ್ಧ ಮನೋವೈದ್ಯ ಚಂದ್ರಶೇಖರ್, ಮಾಜಿ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು, ಮಿಥುನ್ ಚಕ್ರವರ್ತಿ, ಉಷಾ ಉತ್ತುಪ್, ರಾಮ್ ನಾಯಕ್ ಸೇರಿ ಹಲವರಿಗೆ ಇಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಪದ್ಮ ಶ್ರೀ ಪ್ರಶಸ್ತಿ ಪ್ರದಾನ ಮಾಡಿದರು.

ಚಂದ್ರಶೇಖರ್ ಅವರು ಬೆಂಗಳೂರಿನ ಸುತ್ತಮುತ್ತಲ ಹಲವು ಗ್ರಾಮಗಳನ್ನು ದತ್ತುಪಡೆದಿದ್ದರು.ಅಷ್ಟೇ ಅಲ್ಲದೇ ಮನೋ ವೈದ್ಯಕೀಯ ಚಿಕಿತ್ಸೆ ನೀಡುವ ಅವರು, ಮಾನಸಿಕ ಸಮಸ್ಯೆಗಳನ್ನು ಎದುರಿಸುತ್ತಿರುವವರ ಮನೆಗಳಿಗೆ ತೆರಳಿ ಚಿಕಿತ್ಸೆ ನೀಡಿದ್ದರು. ಚಂದ್ರಶೇಖರ್ ಅವರು UNICEF, ಅನೇಕ NGOಗಳು ಮತ್ತು ಸರ್ಕಾರಿ ಏಜೆನ್ಸಿಗಳಿಗೆ ಸಲಹೆಗಾರರಾಗಿದ್ದಾರೆ.

ಸುಲಭ್ ಇಂಟರ್‌ನ್ಯಾಶನಲ್‌ನ ಸಂಸ್ಥಾಪಕ ಬಿಂದೇಶ್ವರ್ ಪಾಠಕ್ ಅವರಿಗೆ ಮರಣೋತ್ತರವಾಗಿ ಪ್ರಶಸ್ತಿ ನೀಡಲಾಯಿತು ಮತ್ತು ಖ್ಯಾತ ಭರತನಾಟ್ಯ ನೃತ್ಯಗಾರ್ತಿ ಪದ್ಮಾ ಸುಬ್ರಹ್ಮಣ್ಯಂ ಅವರಿಗೆ ಪದ್ಮವಿಭೂಷಣ ಪ್ರಶಸ್ತಿಯನ್ನು ನೀಡಲಾಯಿತು.

ಉಪರಾಷ್ಟ್ರಪತಿ ಜಗದೀಪ್ ಧನ್ಕರ್, ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ವಿದೇಶಾಂಗ ಸಚಿವ ಎಸ್ ಜೈಶಂಕರ್ ಸೇರಿದಂತೆ ಇತರರು ಸಮಾರಂಭದಲ್ಲಿ ಉಪಸ್ಥಿತರಿದ್ದರು.

ದೇಶದ ಅತ್ಯುನ್ನತ ನಾಗರಿಕ ಗೌರವಗಳಲ್ಲಿ ಒಂದಾದ ಪದ್ಮ ಪ್ರಶಸ್ತಿಗಳನ್ನು ಪದ್ಮವಿಭೂಷಣ, ಪದ್ಮಭೂಷಣ ಮತ್ತು ಪದ್ಮಶ್ರೀ ಎಂಬ ಮೂರು ವಿಭಾಗಗಳಲ್ಲಿ ನೀಡಲಾಗುತ್ತದೆ. ಪ್ರಸಕ್ತ ಸಾಲಿನಲ್ಲಿ 132 ಪದ್ಮ ಪ್ರಶಸ್ತಿಗಳನ್ನು ಪ್ರದಾನ ಮಾಡಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!