October 9, 2026
Friday, October 9, 2026
spot_img

ಪತ್ನಿಗೆ ನೇಣು ಹಾಕಿ ಒದ್ದಾಡುತ್ತಿರುವಾಗ ಅತ್ತೆ ಮಾವನಿಗೆ ವಿಡಿಯೋ ಕಾಲ್‌ ಮಾಡಿ ತೋರಿಸಿದ ಸೈಕೋ ಗಂಡ!

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ವ್ಯಕ್ತಿಯೊಬ್ಬ ಪತ್ನಿಗೆ ನೇಣು ಹಾಕಿ ಆಕೆ ಒದ್ದಾಡುವುದನ್ನು ಅತ್ತೆ – ಮಾವನಿಗೆ ವಿಡಿಯೋ ಕಾಲ್‌ ಮಾಡಿ ತೋರಿಸಿದ ಅಮಾನವೀಯ ಘಟನೆ ಬಾಗಲಕೋಟೆಯ ಬೀಳಗಿ ತಾಲೂಕಿನ ಗಲಗಲಿ ಗ್ರಾಮದಲ್ಲಿ ನಡೆದಿದೆ.

ಭಾಗ್ಯಶ್ರೀ ಜಿಗಳೂರು (23) ಕೊಲೆಯಾದ ಮಹಿಳೆ. ಆಕೆಯ ಪತಿ ಪ್ರವೀಣ್ ಜಿಗಳೂರು ಹತ್ಯೆಗೈದ ಆರೋಪಿ. ಪತ್ನಿ ಮೇಲೆ ಅನೈತಿಕ ಸಂಬಂಧದ ಅನುಮಾನದ ಮೇಲೆ ಕಟ್ಟಿಗೆಯಿಂದ ಹಲ್ಲೆಗೈದು ಆಕೆಗೆ ನೇಣು ಬಿಗಿದಿದ್ದ. ಬಳಿಕ ಆಕೆ ಪ್ರಾಣಸಂಕಟದಲ್ಲಿ ಒದ್ದಾಡುವುದನ್ನು ಅತ್ತೆ – ಮಾವನಿಗೆ ವಿಡಿಯೋ ಕಾಲ್‌ ಮಾಡಿ ತೋರಿಸಿದ್ದಾನೆ. ಇಷ್ಟೇ ಅಲ್ಲದೆ ವಿಡಿಯೋವನ್ನು ಮಾಡಿಟ್ಟುಕೊಂಡು ನೋಡುತ್ತಾ ಸಂತಸ ಪಟ್ಟಿದ್ದಾನೆ.

ಪತ್ನಿ ಜಗಳವಾಡಿ ಎರಡು ತಿಂಗಳ ಹಿಂದೆ ತವರುಮನೆ ಮಹಾಲಿಂಗಪುರಕ್ಕೆ ಹೋಗಿದ್ದಳು. ಚೆನ್ನಾಗಿ ಕೂಡಿ ಬಾಳುತ್ತೇವೆ ಎಂದು ಜು.27 ರಂದು ಗಲಗಲಿಗೆ ಕರೆತಂದಿದ್ದ ಪ್ರವೀಣ. ಅದೇ ದಿನ ಸಂಜೆ ಆಕೆಯನ್ನು ಕೊಲೆ ಮಾಡಿದ್ದಾನೆ. ಮಗಳನ್ನು ಕೊಂದು, ಸಾಯುವ ಕೊನೆಗಳಿಗೆಯನ್ನು ವಿಡಿಯೋ ಕಾಲ್‌ ಮೂಲಕ ತೋರಿಸಿ ವಿಕೃತಿ ಮೆರೆದ ವ್ಯಕ್ತಿಗೆ ಕಠಿಣ ಶಿಕ್ಷೆ ನೀಡಿ, ನಮ್ಮ ಮಗಳಿಗೆ ಆದ ಪರಿಸ್ಥಿತಿ ಯಾರಿಗೂ ಬರುವುದು ಬೇಡ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Must Read