Wednesday, June 29, 2022

Latest Posts

ದ್ವಿತೀಯ ಪಿಯು ಫಲಿತಾಂಶ ಪ್ರಕಟ : ಶೇ.61.88 ರಷ್ಟು ವಿದ್ಯಾರ್ಥಿಗಳು ಉತ್ತೀರ್ಣ, ಬಾಲಕಿಯರದ್ದೇ ಮೇಲುಗೈ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌
ದ್ವಿತೀಯ ಪಿಯು ಫಲಿತಾಂಶ ಪ್ರಕಟವಾಗಿದ್ದು ಒಟ್ಟೂ ಶೇ.61.88 ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.

ಒಟ್ಟೂ 6,83,563 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು ಅವರಲ್ಲಿ 4,22,966 ವಿದ್ಯಾರ್ಥಿಗಳು(ಶೇ.61.88 ) ಉತ್ತೀರ್ಣರಾಗಿದ್ದಾರೆ. ಉತ್ತೀರ್ಣರಾದ ವಿದ್ಯಾರ್ಥಿಗಳಲ್ಲಿ ಶೇ.68.72 ಬಾಲಕಿಯರು ಉತ್ತೀರ್ಣರಾಗುವ ಮೇಲುಗೈ ಸಾಧಿಸಿದ್ದಾರೆ. ಶೇ.55.22ರಷ್ಟು ಬಾಲಕರು ಉತ್ತೀರ್ಣರಾಗಿದ್ದಾರೆ. ಪೂರಕ ಪರೀಕ್ಷೆಯ ದಿನಾಂಕವನ್ನು ಈ ತಿಂಗಳಾಂತ್ಯಕ್ಕೆ ಪ್ರಕಟಿಸಲಾಗುವುದು ಎಂದು ಶಿಕ್ಷಣ ಸಚಿವ ಬಿಸಿ ನಾಗೇಶ್‌ ಟ್ವೀಟ್‌ ಮಾಡಿದ್ದಾರೆ.

2021-22ನೇ ಸಾಲಿನ ಕರ್ನಾಟಕ ರಾಜ್ಯ ದ್ವಿತೀಯ ಪಿಯುಸಿ ಫಲಿತಾಶ ಪ್ರಕಟವಾಗಿದ್ದು ಜಿಲ್ಲಾವಾರು ಫಲಿತಾಂಶದಲ್ಲಿ ದಕ್ಷಿಣ ಕನ್ನಡ (88.02) ಮೊದಲ ಸ್ಥಾನ ಪಡೆದಿದ್ದರೆ, ಉಡುಪಿ ಜಿಲ್ಲೆ ( 86.38) ಎರಡನೇ ಸ್ಥಾನ ಪಡೆದಿದೆ.ವಿಜಯಪುರ ಮೂರನೇ ಸ್ಥಾನ, ಬೆಂಗಳೂರು ದಕ್ಷಿಣ 4, ಉತ್ತರ ಕನ್ನಡ 5 ನೇ ಸ್ಥಾನ ಗಳಿಸಿದರೆ  ಶೇ 49.31 ಫಲಿತಾಂಶ ಪಡೆದಿರುವ ಚಿತ್ರದುರ್ಗ ಕೊನೆಯ ಸ್ಥಾನದಲ್ಲಿದೆ.

ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆಯು ಏಪ್ರಿಲ್ 22ರಿಂದ ಮೇ 18ರವರೆಗೆ ನಡೆದಿತ್ತು. ಒಟ್ಟು 1076 ಪರೀಕ್ಷಾ ಕೇಂದ್ರಗಳಲ್ಲಿ 6,83,563 ಮಂದಿ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು.

ಗಣಿತ ವಿಷಯದಲ್ಲಿ 14,210 ವಿದ್ಯಾರ್ಥಿಗಳು, ಅಕೌಂಟನ್ಸಿಯಲ್ಲಿ 3,460 ವಿದ್ಯಾರ್ಥಿಗಳು ಹಾಗೆಯೇ ಕಂಪ್ಯೂಟರ್‌ ಸೈನ್ಸ್‌ ನಲ್ಲಿ 4,868 ವಿದ್ಯಾರ್ಥಿಗಳು ನೂರಕ್ಕೆ ನೂರು ಅಂಕಗಳಿಸಿದ್ದಾರೆ.

ವಿದ್ಯಾರ್ಥಿಗಳು ಫಲಿತಾಂಶ ವೀಕ್ಷಿಸಲು ಇಲಾಖೆಯ ವೆಬ್‌ ಸೈಟ್‌ http://www.karresults.nic.in ಗೆ ಭೇಟಿ ನೀಡಬಹುದಾಗಿದ್ದು 12 ಗಂಟೆಯ ನಂತರ ಫಲಿತಾಂಶ ಲಭ್ಯವಾಗಲಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss