ಹೊಸದಿಗಂತ ಡಿಜಿಟಲ್ ಡೆಸ್ಕ್:
ಇನ್ನೇನು ಕೆಲವೇ ದಿನಗಳಲ್ಲಿ ಆಷಾಢ ಮಾಸ ಆರಂಭವಾಗಲಿದೆ. ಆಷಾಢ ಮಾಸದಲ್ಲಿ ಸಾವಿರಾರು ಭಕ್ತರು ಚಾಮುಂಡಿ ಬೆಟ್ಟಕ್ಕೆ ತೆರಳಿ, ಚಾಮುಂಡೇಶ್ವರಿ ಅಮ್ಮನವರ ದರ್ಶನ ಪಡೆಯುತ್ತಾರೆ.
ವಿಶೇಷವಾಗಿ ಆಷಾಢ ಶುಕ್ರವಾರ, ವರ್ಧಂತಿ ದಿನಗಳಂದು ಮತ್ತು ರವಿವಾರದಂದು ಅಪಾರ ಸಂಖ್ಯೆಯಲ್ಲಿ ಭಕ್ತರು ಚಾಮುಂಡಿ ಬೆಟ್ಟಕ್ಕೆ ತೆರಳುವ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಸಕಲ ಸಿದ್ದತೆ ಮಾಡಿಕೊಂಡಿದೆ. ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತಾದಿಗಳಿಗೆ ಮೈಸೂರು ಪೊಲೀಸರು ಕೆಲವು ಸೂಚನೆಗಳನ್ನು ನೀಡಿದ್ದಾರೆ. ಚಾಮುಂಡಿ ಬೆಟ್ಟದ ಮೇಲೆ ಸಾರ್ವಜನಿಕರ ವಾಹನ ವಾಹನ ನಿಲುಗಡೆಯನ್ನು ನಿಷೇಧಿಸಲಾಗಿದೆ.
ಈ ಕುರಿತು ಮೈಸೂರು ನಗರ ಪೊಲೀಸರು ಸಾಮಾಜಿಕ ಜಾಲತಾಣ ಫೇಸ್ಬುಕ್ನಲ್ಲಿ ಪೋಸ್ಟ್ ಮಾಡಿದ್ದು, ಚಾಮುಂಡೇಶ್ವರಿ ಅಮ್ಮನವರ ದೇವಸ್ಥಾನದ ಆಷಾಧ ಶುಕ್ರವಾರದಂದು ಸಾರ್ವಜನಿಕರ ಅನುಕೂಲಕ್ಕಾಗಿ ಲಲಿತ ಮಹಲ್ ಹೋಟೆಲ್ ಬಳಿ ತಾತ್ಕಾಲಿಕ ಪಾರ್ಕಿಂಗ್ ವ್ಯವಸ್ಥೆ ಮಾಡಲಾಗಿದೆ.
ಸಾರ್ವಜನಿಕರು ಅಲ್ಲಿ ತಮ್ಮ ವಾಹನಗಳ್ಳನ್ನು ಪಾರ್ಕ್ ಮಾಡಿ ನಂತರ ಕೆಎಸ್ಆರ್ಟಿಸಿ ಬಸ್ಗಳ ಮೂಲಕ ಬೆಟ್ಟಕ್ಕೆ ಹೋಗಬೇಕು ಎಂದು ಮನವಿ ಮಾಡಿದ್ದಾರೆ. ಮತ್ತು ಪಾರ್ಕಿಂಗ್ ಸ್ಥಳ ಪರಿಶೀಲನೆಗಾಗಿ ಕ್ಯೂರ್ ಕೋಡ್ ಬಳಸಿ ಎಂದಿದ್ದಾರೆ.