ಹೊಸದಿಗಂತ ವರದಿ,ಚಿತ್ರದುರ್ಗ:
ಪರಿಸರ ಸಂರಕ್ಷಣೆಗಾಗಿ ರಾಜ್ಯ ಸರ್ಕಾರ ಜಾರಿಗೆ ತಂದಿರುವ ಸಾಕಷ್ಟು ಯೋಜನೆಗಳು ಯಶಸ್ವಿಯಾಗಬೇಕಾದರೆ ಸಾರ್ವಜನಿಕರು ಕೈಜೋಡಿಸಬೇಕೆಂದು ಸಾಲು ಮರದ ತಿಮ್ಮಕ್ಕ ಮನವಿ ಮಾಡಿದರು.
ಭೋವಿ ಗುರುಪೀಠದ ಪೀಠಾಧ್ಯಕ್ಷರಾದ ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿರವರ ದೀಕ್ಷಾ ರಜತ ಮಹೋತ್ಸವ ಕಾರ್ಯಕ್ರಮದ ಅಂಗವಾಗಿ ಭೋವಿ ಗುರುಪೀಠದಲ್ಲಿ ಗುರುವಾರ ಹಮ್ಮಿಕೊಳ್ಳಲಾಗಿದ್ದ ಗಿಡ ನೆಡುವ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.
ಗಿಡಗಳೆ ಮಕ್ಕಳು, ಗಿಡವಿದ್ದರೆ ಎಲ್ಲರೂ ಉಳಿಯಲು ಸಾಧ್ಯ. ಅದಕ್ಕಾಗಿ ಎಲ್ಲರೂ ಒಂದೊಂದು ಗಿಡ ನೆಟ್ಟು ಜೋಪಾನವಾಗಿ ಕಾಪಾಡಿರಪ್ಪ ಎಂದು ಸಾಲುಮರದ ತಿಮ್ಮಕ್ಕ ಮಕ್ಕಳಿಗೆ ಬುದ್ದಿ ಮಾತು ಹೇಳಿದರು.
ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಅನೇಕ ಯೋಜನೆಗಳನ್ನು ಜಾರಿಗೆ ತಂದಿದ್ದಾರೆ. ಗಿಡ-ಮರಗಳ ರಕ್ಷಣೆಗಾಗಿ ಖರ್ಚು ಮಾಡುತ್ತಿರುವ ಹಣ ವ್ಯರ್ಥವಾಗಬಾರದು. ಎಲ್ಲರೂ ಗಿಡ ನೆಟ್ಟು ಪೋಷಿಸಿ ದೊಡ್ಡ ಮರವನ್ನಾಗಿ ಬೆಳೆಸಿ ಪರಿಸರಕ್ಕೆ ಕೊಡುಗೆ ಕೊಡಬೇಕಾಗಿದೆ ಎಂದರು.
ಸಾಲು ಮರದ ತಿಮ್ಮಕ್ಕನ ಪುತ್ರ ಉಮೇಶ್ ಮಾತನಾಡಿ ಇಮ್ಮಡಿ ಸಿದ್ದರಾಮೇಶ್ವರ ಸ್ವಾಮಿಗಳು ದೀಕ್ಷಾ ರಜತ ಮಹೋತ್ಸವದ ನಿಮಿತ್ತ ಪರಿಸರ ಸಸ್ಯೋತ್ಸವ ಹಮ್ಮಿಕೊಂಡಿರುವುದು ಪುಣ್ಯದ ಕೆಲಸ. ರಾಜ್ಯಾದ್ಯಂತ ಗಿಡ ನೆಡುವ ಕಾರ್ಯಕ್ರಮಕ್ಕೆ ಮುಂದಾಗಿರುವುದು ಇಡೀ ದೇಶಕ್ಕೆ ಮಾದರಿ ಎಂದು ಹೇಳಿದರು.
ಹುಟ್ಟುಹಬ್ಬವೆಂದರೆ ಸಾಮಾನ್ಯವಾಗಿ ಎಲ್ಲರೂ ವಿಜೃಂಭಣೆಯಿಂದ ಆಚರಿಸಿಕೊಳ್ಳುವುದು ಸಹಜ. ಇಂತಹ ಕಾಲದಲ್ಲಿ ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿ ಪರಿಸರ ಸಂರಕ್ಷಣೆಗೆ ಒತ್ತು ಕೊಡುತ್ತಿರುವುದು ಸಂತೋಷದ ಸಂಗತಿ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿ, ಕಾಗಿನೆಲೆ ಗುರುಪೀಠದ ನಿರಂಜನಾನಂದಪುರಿ ಸ್ವಾಮೀಜಿ, ಹೊಸದುರ್ಗ ಕುಂಚಿಟಿಗ ಮಹಾಸಂಸ್ಥಾನ ಮಠದ ಡಾ.ಶಾಂತವೀರಸ್ವಾಮೀಜಿ, ಬಸವ ಜಯ ಮೃತ್ಯುಂಜಯ ಸ್ವಾಮೀಜಿ, ರಾಜನಹಳ್ಳಿ ವಾಲ್ಮೀಕಿ ಗುರುಪೀಠದ ಪ್ರಸನ್ನಾನಂದ ಸ್ವಾಮೀಜಿ, ಮಾದಾರ ಚನ್ನಯ್ಯ ಗುರುಪೀಠದ ಬಸವಮೂರ್ತಿ ಮಾದಾರ ಚನ್ನಯ್ಯ ಸ್ವಾಮೀಜಿ, ಹೊಸದುರ್ಗ ಭಗೀರಥ ಪೀಠದ ಪುರುಷೋತ್ತಮಾನಂದಪುರಿ ಸ್ವಾಮೀಜಿ, ಹರಿಹರದ ವಚನಾನಂದಸ್ವಾಮೀಜಿ, ಯಾದವ ಮಹಾಸಂಸ್ಥಾನ ಮಠದ ಕೃಷ್ಣ ಯಾದವಾನಂದ ಸ್ವಾಮೀಜಿ.
ಬಸವ ಮಾಚಿದೇವ ಸ್ವಾಮೀಜಿ, ಶಾಂತ ಭೀಷ್ಮ ಅಂಬಿಗರ ಚೌಡಯ್ಯ ಸ್ವಾಮೀಜಿ, ಹಡಪದ ಅಪ್ಪಣ್ಣ ಗುರುಪೀಠದ ಅಪ್ಪಣ್ಣ ಸ್ವಾಮಿ, ಕುಂಬಾರ ಗುಂಡಯ್ಯ ಮಹಾಸ್ವಾಮೀಜಿ, ಇಮ್ಮಡಿ ಬಸವ ಮೇದಾರ ಕೇತೇಶ್ವರ ಸ್ವಾಮೀಜಿ, ಹೊಸದುರ್ಗ ಕನಕ ಗುರುಪೀಠದ ಈಶ್ವರಾನಂದಪುರಿ ಸ್ವಾಮೀಜಿ, ಸಿದ್ದರಾಮಯ್ಯನಂದಪುರಿ ಸ್ವಾಮೀಜಿ, ಶಿವಬಸವ ಸ್ವಾಮೀಜಿ, ಬಸವ ಪ್ರಸಾದ ಸ್ವಾಮೀಜಿ, ಮಹಾಲಿಂಗ ಸ್ವಾಮೀಜಿ, ನಾಗೇಂದ್ರ ಸ್ವಾಮೀಜಿ, ಬಸವಪ್ರಭು ಸ್ವಾಮೀಜಿ, ಮರುಳಸಿದ್ದ ಸ್ವಾಮೀಜಿ, ಬಸವ ನವಲಿಂಗ ಶರಣರು, ಶಾಂತ ಮಲ್ಲಿಕಾರ್ಜುನ ಸ್ವಾಮೀಜಿ, ಶಾಂತಲಿಂಗಸ್ವಾಮೀಜಿ, ಜಯದೇವ ಸ್ವಾಮೀಜಿ, ಬಸವ ರಮಾನಂದ ಸ್ವಾಮೀಜಿ, ಚನ್ನಬಸವ ಸ್ವಾಮೀಜಿ, ಬಸವಲಿಂಗಮೂರ್ತಿ ಸ್ವಾಮೀಜಿ, ಮಹಾಂತ ಸ್ವಾಮೀಜಿ, ಶಾಂತವೀರ ಗುರು ಮುರುಘರಾಜೇಂದ್ರ ಸ್ವಾಮೀಜಿ, ಶಶಿಶೇಖರ ಸಿದ್ದಬಸವ ಸ್ವಾಮೀಜಿ, ಮಾತೆ ಸತ್ಯಕ್ಕ, ನೀಲಲೋಚನ ಮಾತೆ ಚಿನ್ಮಯಿ ತಾಯಿ, ಬಸವ ಲಿಂಗ ತಾಯಿ, ಜಿಲ್ಲಾ ರಕ್ಷಣಾಧಿಕಾರಿ ಧರ್ಮೇಂದ್ರಕುಮಾರ್ ಮೀನ, ಉಪ ಅರಣ್ಯ ಸಂರಕ್ಷಣಾಧಿಕಾರಿ, ಭೋವಿ ಮುಖಂಡರಾದ ನೇರ್ಲಗುಂಟೆ ರಾಮಪ್ಪ ಇನ್ನು ಅನೇಕರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.