ಹೊಸದಿಗಂತ ಡಿಜಿಟಲ್ ಡೆಸ್ಕ್:
ಪ್ರತಿ ವಾರಕ್ಕೊಮ್ಮೆ ಜನ ಸಂಪರ್ಕ ಸಭೆ ನಡೆಸುವಂತೆ ಸಿಎಂ ಸಿದ್ದರಾಮಯ್ಯ ಅಧಿಕಾರಿಗಳಿಗೆ ಇಂದು ತಾಕೀತು ಮಾಡಿದರು. ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಎಲ್ಲಾ ಜಿಲ್ಲೆ ಗಳ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯತ್ ಸಿಇಒಗಳ ಜೊತೆ ಸಭೆ ನಡೆಸಿ, ಆಯಾ ಜಿಲ್ಲೆಗಳ ಸಚಿವರು, ಶಾಸಕರನ್ನು ಕರೆಸಿ ಜನರ ಸಮಸ್ಯೆಗಳನ್ನು ಸ್ಥಳೀಯ ಮಟ್ಟದಲ್ಲಿ ಬಗೆಹರಿಸುವಂತೆ ಸೂಚಿಸಿದರು.
ನೀವು ತಹಸೀಲ್ದಾರ್, ಜಿಲ್ಲಾಧಿಕಾರಿಗಳು, ಸಿಇಓಗಳು ಏನು ಮಾಡುತ್ತಿದ್ದೀರಿ? ಪ್ರತಿ ವಾರಕ್ಕೊಮ್ಮೆ ಜನರ ಕಷ್ಟ ಆಲಿಸಿದರೆ ಅವರ್ಯಾಕೆ ನನ್ನ ಬಳಿ ಬಂದು ದೂರು ಕೊಡುತ್ತಾರೆ ಎಂದು ಪ್ರಶ್ನಿಸಿದರು. ಇನ್ಮುಂದೆ ಎಲ್ಲವೂ ಸ್ಥಳೀಯ ಮಟ್ಟದಲ್ಲೇ ಸಮಸ್ಯೆಗಳು ಬಗೆಹರಿಯಬೇಕು. ಸರ್ಕಾರ ಎಂಬುದು ಜನರ ಭರವಸೆಯ ಬೆಳಕಾಗಿರಬೇಕು ಎಂಬುದನ್ನು ನೆನಪಿನಲ್ಲಿಡಿ ಎಂದು ಸಲಹೆ ನೀಡಿದರು.
ಇನ್ಮುಂದೆ ಪ್ರತಿವಾರ ಆಯಾ ಜಿಲ್ಲೆಗಳ ಜಿಲ್ಲಾಧಿಕಾರಿಗಳು, ಸಿಇಒಗಳು, ತಹಶೀಲ್ದಾರರು ಜನಸಂಪರ್ಕ ಸಭೆ ನಡೆಸಿ ಜನರ ಸಮಸ್ಯೆಗಳನ್ನು ಆಲಿಸಿ, ಅವರಿಗೆ ಸೂಕ್ತ ಪರಿಹಾರ ನೀಡುವಂತೆ ಅಧಿಕಾರಿಗಳಿಗೆ ಸಿಎಂ ಖಡಕ್ ವಾರ್ನಿಂಗ್ ಕೊಟ್ಟರು.