ಮುಂದಿನ ವರ್ಷದಿಂದ ನ್ಯೂಯಾರ್ಕ್ ನಗರದಲ್ಲಿ ದೀಪಾವಳಿಗೆ ಸಾರ್ವಜನಿಕ ಶಾಲಾ ರಜೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

2023 ರಿಂದ ನ್ಯೂಯಾರ್ಕ್ ನಗರದಲ್ಲಿ ದೀಪಾವಳಿ ಸಾರ್ವಜನಿಕ ಶಾಲಾ ರಜೆಯಾಗಿರುತ್ತದೆ ಎಂದು ನಗರದ ಮೇಯರ್ ಎರಿಕ್ ಆಡಮ್ಸ್ ಘೋಷಿಸಿದ್ದಾರೆ.

ಗುರುವಾರ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಮೇಯರ್ ಎರಿಕ್ ಆಡಮ್ಸ್, ಈ ದೀರ್ಘಾವಧಿಯ ಹೆಜ್ಜೆಯು ನಗರದ ಒಳಗೊಳ್ಳುವಿಕೆಯ ಬಗ್ಗೆ ಸಂದೇಶವನ್ನು ಕಳುಹಿಸುತ್ತದೆ, ಹಬ್ಬದ ಬಗ್ಗೆ ಇನ್ನಷ್ಟು ತಿಳಿದುಕೊಳ್ಳಲು ಮಕ್ಕಳನ್ನು ಉತ್ತೇಜಿಸುತ್ತದೆ ಎಂದು ಅಭಿಪ್ರಾಯ ಪಟ್ಟಿದ್ದಾರೆ ಎಂದು ಮೂಲಗಳು ಉಲ್ಲೇಖಿಸಿವೆ.

“ಇದು ಭಾರತೀಯ-ಅಮೆರಿಕನ್ ಸಮುದಾಯದ ಬಹುಕಾಲದ ಬೇಡಿಕೆಯಾಗಿತ್ತು. ಈ ಮನ್ನಣೆಯು ನ್ಯೂಯಾರ್ಕ್ ನಗರದಲ್ಲಿನ ವೈವಿಧ್ಯತೆ ಮತ್ತು ಬಹುತ್ವಕ್ಕೆ ಆಳವಾದ ಅರ್ಥವನ್ನು ನೀಡುತ್ತದೆ ಮತ್ತು ಜೀವನದ ಎಲ್ಲಾ ವರ್ಗದ ಜನರು ಭಾರತೀಯ ನೀತಿ ಮತ್ತು ಪರಂಪರೆಯನ್ನು ಅನುಭವಿಸಲು, ಆಚರಿಸಲು ಮತ್ತು ಆನಂದಿಸಲು ಅನುವು ಮಾಡಿಕೊಡುತ್ತದೆ ”ಎಂದು ನ್ಯೂಯಾರ್ಕ್‌ನಲ್ಲಿರುವ ಭಾರತದ ಕಾನ್ಸುಲ್ ಜನರಲ್ ರಣಧೀರ್ ಜೈಸ್ವಾಲ್ ಅವರನ್ನು ಉಲ್ಲೇಖಿಸಿ ಪಿಟಿಐ ವರದಿ ಮಾಡಿದೆ.

“ಬೆಳಕಿನ ಹಬ್ಬವಾದ ದೀಪಾವಳಿಯನ್ನು ಆಚರಿಸುವ ಹಿಂದೂ, ಬೌದ್ಧ, ಸಿಖ್ ಮತ್ತು ಜೈನ ಧರ್ಮಗಳ 200,000 ನ್ಯೂಯಾರ್ಕರನ್ನು ಗುರುತಿಸುವ ಸಮಯ ಬಂದಿದೆ” ಎಂದು ಸಿಎನ್‌ಎನ್ ನ್ಯೂಯಾರ್ಕ್ ಅಸೆಂಬ್ಲಿ ಸದಸ್ಯೆ ಜೆನಿಫರ್ ರಾಜ್‌ಕುಮಾರ್ ಅವರು ಪತ್ರಿಕಾಗೋಷ್ಠಿಯಲ್ಲಿ ಹೇಳಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!