ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಅಂತಿಮ ವೇಳಾಪಟ್ಟಿ ಪ್ರಕಟ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಪದವಿ ಪೂರ್ವ ಶಿಕ್ಷಣ ಇಲಾಖೆಯಿಂದ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಅಂತಿಮ ವೇಳಾಪಟ್ಟಿಯನ್ನು ಪ್ರಕಟಿಸಿದ್ದು, ದಿನಾಂಕ 16-04-2022 ರಿಂದ ದಿನಾಂಕ 06-05-2022ರವರೆಗೆ ಪರೀಕ್ಷೆ ನಡೆಯಲಿವೆ.
ಈ ಹಿಂದೆ ತಾತ್ಕಾಲಿಕ ವೇಳಾಪಟ್ಟಿಯನ್ನ ಪ್ರಕಟಿಸಿದ್ದ ಪಿಯು ಬೋರ್ಡ್, ಇದೀಗ ಅಂತಿಮ ವೇಳಾಪಟ್ಟಿ ಬಿಡುಗಡೆ ಮಾಡಿದ್ದು, ಏಪ್ರಿಲ್ 16 ರಂದು ಗಣಿತಶಾಸ್ತ್ರ ವಿಷಯದ ಮೂಲಕ ಪರೀಕ್ಷೆ ಆರಂಭಗೊಳ್ಳಲಿವೆ.

ದ್ವಿತೀಯ ಪಿಯುಸಿ ವೇಳಾಪಟ್ಟಿ ಹೀಗಿದೆ

16-4-2022- ಗಣಿತಶಾಸ್ತ್ರ, ಶಿಕ್ಷಣ ಶಾಸ್ತ್ರ, ಮೂಲ ಗಣಿತ

18-4-2022- ರಾಜ್ಯಶಾಸ್ತ್ರ, ಸಂಖ್ಯಾಶಾಸ್ತ್ರ

19-4-2022 ಮಾಹಿತಿ ತಂತ್ರಜ್ಞಾನ, ರೀಟೈಲ್, ಆಟೋ ಮೊಬೈಲ್, ಹೆಲ್ತ್ ಕೇರ್, ಬ್ಯೂಟಿ ಅಂಡ್ ವೆಲ್ ನೆಸ್

20-4-2022 – ಇತಿಹಾಸ, ಭೌತಶಾಸ್ತ್ರ

21-4-2022- ತಮಿಳು, ತೆಲುಗು, ಮಲಯಾಳಂ, ಮರಾಠಿ, ಉರ್ದು, ಸಂಸ್ಕೃತ, ಅರೇಬಿಕ್, ಫ್ರೆಂಚ್

22-4-2022- ತರ್ಕ ಶಾಸ್ತ್ರ, ವ್ಯವಹಾರ ಅಧ್ಯಯನ

23- 4-2022- ಕರ್ನಾಟಕ ಸಂಗೀತ, ಹಿಂದುಸ್ತಾನಿ ಸಂಗೀತ, ಮನಃಶಾಸ್ತ್ರ, ರಸಾಯನಶಾಸ್ತ್ರ

25-4-2022- ಅರ್ಥ ಶಾಸ್ತ್ರ

26-4-2022- ಹಿಂದಿ

28-4-2022- ಕನ್ನಡ

30-4-2022- ಸಮಾಜ ಶಾಸ್ತ್ರ, ವಿದ್ಯುನ್ಮಾನ ಶಾಸ್ತ್ರ, ಗಣಕ ವಿಜ್ಞಾನ

2-5-2022- ಭೂಗೋಳ ಶಾಸ್ತ್ರ, ಜೀವಶಾಸ್ತ್ರ

4-5-2022- ಇಂಗ್ಲಿಷ್

6-5-2022- ಲೆಕ್ಕ ಶಾಸ್ತ್ರ, ಭೂಗರ್ಭ ಶಾಸ್ತ್ರ, ಗೃಹ ವಿಜ್ಞಾನ, ಐಚ್ಛಿಕ ಕನ್ನಡ

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!