ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಿಹಾರದ ಕರಡು ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವುದರಿಂದ ಸಮಸ್ಯೆ ಎದುರಿಸುತ್ತಿರುವವರು ತಮ್ಮ ಆಧಾರ್ ಕಾರ್ಡ್ನೊಂದಿಗೆ ಚುನಾವಣಾಧಿಕಾರಿಗಳನ್ನು ಸಂಪರ್ಕಿಸುವಂತೆ ಸುಪ್ರೀಂ ಕೋರ್ಟ್ ಹೇಳಿದೆ.
ಕೈಬಿಟ್ಟಿರುವ 65 ಲಕ್ಷ ಮತದಾರರ ಪಟ್ಟಿ ಎಲ್ಲಿ ಲಭ್ಯವಿರಲಿದೆ ಎಂಬುವುದನ್ನು ಜನರಿಗೆ ತಿಳಿಸಲು ಸುದ್ದಿ ವಾಹಿನಿಗಳು, ರೇಡಿಯೋ ಮತ್ತು ಪತ್ರಿಕೆಗಳ ಮೂಲಕ ವ್ಯಾಪಕ ಪ್ರಚಾರ ನೀಡಬೇಕು. 2025ರ ಪಟ್ಟಿಯಲ್ಲಿ ಹೆಸರು ಇದ್ದರೂ ಕರಡು ಪಟ್ಟಿಯಲ್ಲಿ ಸೇರ್ಪಡೆಯಾಗದ 65 ಲಕ್ಷ ಮತದಾರರ ಪಟ್ಟಿಯನ್ನು ಜಿಲ್ಲಾ ಚುನಾವಣಾ ಅಧಿಕಾರಿಗಳ ಜಾಲತಾಣಗಳಲ್ಲಿ ಪ್ರದರ್ಶಿಸಬೇಕು. ಮಾಹಿತಿಯು ಬೂತ್ ಮಟ್ಟದ್ದಾಗಿರಬೇಕು. ಇಪಿಐಸಿ ಸಂಖ್ಯೆ ನಮೂದಿಸಿ ಅದರ ವಿವರಗಳನ್ನು ಪಡೆಯಲು ಸಾಧ್ಯವಾಗುವಂತಿರಬೇಕು ಎಂದು ನಿರ್ದೇಶನ ನೀಡಿದೆ.