Thursday, July 7, 2022

Latest Posts

ಪಿಯುಸಿ ವಿಜ್ಞಾನ ವಿಭಾಗದಲ್ಲಿ ಗ್ರಾಮೀಣ ಪ್ರತಿಭೆ ಭವಾನಿ ದತ್ತಾತ್ರಿಗೆ ಗರಿಷ್ಠ ಅಂಕ

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
……………………………………………………….

ಹೊಸ ದಿಗಂತ ವರದಿ, ಬೀದರ್:

ಗ್ರಾಮೀಣ ಪ್ರದೇಶದ ವಿದ್ಯಾರ್ಥಿನಿಯೊಬ್ಬರು ಪ್ರಸಕ್ತ ಸಾಲಿನ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದ ಪರೀಕ್ಷೆಯಲ್ಲಿ
600ಕ್ಕೆ 600 ಅಂಕ ಪಡೆಯುವ ಮೂಲಕ ಸಾಧನೆ ಮೆರೆದಿದ್ದಾರೆ.
ಭಾಲ್ಕಿ ತಾಲ್ಲೂಕಿನ ಹಲಬರ್ಗಾ ಗ್ರಾಮದ ಭವಾನಿ ದತ್ತಾತ್ರಿ ಬಾವಗೆ ಎಲ್ಲರೂ ಹುಬ್ಬೇರಿಸುವಂತಹ ಸಾಧನೆ ಮಾಡಿದ್ದಾರೆ.
ಬೀದರ್‍ನ ಶಾಹೀನ್ ಪದವಿಪೂರ್ವ ವಿಜ್ಞಾನ ಕಾಲೇಜು ವಿದ್ಯಾರ್ಥಿನಿಯಾಗಿರುವ ಭವಾನಿ ಭೌತವಿಜ್ಞಾನ, ರಸಾಯನವಿಜ್ಞಾನ,
ಗಣಿತ, ಜೀವವಿಜ್ಞಾನ, ಕನ್ನಡ, ಇಂಗ್ಲಿಷ್ ಎಲ್ಲ ವಿಷಯಗಳಲ್ಲೂ 100ಕ್ಕೆ 100 ಅಂಕ ಗಳಿಸಿದ್ದಾರೆ. ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಶೇ.98 ರಷ್ಟು
ಅಂಕ ಪಡೆದಿದ್ದರು.
ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಗರಿಷ್ಠ ಅಂಕ ದೊರೆತಿರುವುದಕ್ಕೆ ಸಂತಸ ವ್ಯಕ್ತಪಡಿಸಿರುವ ಭವಾನಿ, ನೀಟ್‍ನಲ್ಲೂ ಉತ್ತಮ ರ್ಯಾಂಕ್ ಗಳಿಸುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ವೈದ್ಯೆಯಾಗಿ ಗ್ರಾಮೀಣ ಪ್ರದೇಶದ ಬಡ ಜನರ ಸೇವೆ ಮಾಡುವ ಆಸೆ ಇದೆ ಎಂದು ತಮ್ಮ ಜೀವನದ ಗುರಿಯನ್ನು ಹಂಚಿಕೊಂಡಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss