ಜೂ.1 ರಿಂದ ಪಿಯುಸಿ ತರಗತಿಗಳು ಆರಂಭ

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಪದವಿ ಪೂರ್ವ ಶಿಕ್ಷಣ ಇಲಾಖೆಯು ರಾಜ್ಯ ಪಠ್ಯಕ್ರಮ ಅನುಸರಿಸುತ್ತಿರುವ ರಾಜ್ಯದ ಎಲ್ಲ ಸರ್ಕಾರಿ, ಅನುದಾನಿತ ಮತ್ತು ಅನುದಾನರಹಿತ ಪದವಿ ಪೂರ್ವ ಕಾಲೇಜುಗಳ 2023-24ನೇ ಸಾಲಿನ ಶೈಕ್ಷಣಿಕ ವರ್ಷದ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದ್ದು , 2023ರ ಜೂನ್ 1 ರಿಂದ 2023-24ನೇ ಸಾಲಿನ ಪ್ರಥಮ ಹಾಗೂ ದ್ವಿತೀಯ ಪಿಯು ತರಗತಿಗಳನ್ನು ಆರಂಭಿಸಲು ನಿರ್ಧರಿಸಲಾಗಿದೆ.

ಮೇ 22ರಿಂದ ದ್ವಿತೀಯ ಪಿಯುಸಿ ದಾಖಲಾತಿ ಪ್ರಕ್ರಿಯೆ ಆರಂಭವಾಗಿದ್ದು, ಪ್ರಥಮ ಪಿಯುಸಿ ದಾಖಲಾತಿ ಪ್ರಕ್ರಿಯೆ ಎಸ್‌ಎಸ್ ಎಲ್ ಸಿ ಫಲಿತಾಂಶ ಪ್ರಕಟವಾದ ನಂತರ ಮೊದಲ ಕಾರ್ಯನಿರತ ದಿನದಿಂದ ಪ್ರಾರಂಭವಾಗಲಿದೆ.

ಪಿಯುಸಿ ತರಗತಿಗಳಿಗೆ 14-10-2023 ರಿಂದ 29-10-2023 ರವರೆಗೆ ಮಧ್ಯಂತರ ರಜೆ ಘೋಷಣೆ ಮಾಡಲಾಗಿದ್ದು, ದಿನಾಂಕ 31-03-2024 ರಿಂದ ಬೇಸಿಗೆ ರಜೆ ಪ್ರಾರಂಭವಾಗಲಿದೆ ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆ ಮಾಹಿತಿ ನೀಡಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!