PUC EXAM | ಇಂದಿನಿಂದ ಪಿಯುಸಿ ಪರೀಕ್ಷೆ: ತೀವ್ರ ಕಣ್ಗಾವಲು, ಉಚಿತ ಪ್ರಯಾಣ ವ್ಯವಸ್ಥೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

2024-25ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ-1 ಇಂದು ಮಾರ್ಚ್ 1ರಿಂದ ಮಾರ್ಚ್ 20ವರೆಗೆ ರಾಜ್ಯಾದ್ಯಂತ ನಡೆಯಲಿದೆ. ಈ ಬಾರಿ ಪರೀಕ್ಷೆಯನ್ನು ಕಟ್ಟುನಿಟ್ಟಾಗಿ ನಡೆಸಲು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಸಕಲ ಸಿದ್ಧತೆ ಮಾಡಿಕೊಂಡಿದೆ.

ಈ ಬಾರಿ ದ್ವಿತೀಯ ಪಿಯುಸಿ ಪರೀಕ್ಷೆಗೆ 7,13,812 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದು, ಇದರಲ್ಲಿ ಹೊಸಬರು 6,61,474 ಪುನರಾವರ್ತಿತ 34,071 ಹಾಗೂ 18,317 ಖಾಸಗಿ ಅಭ್ಯರ್ಥಿಗಳು ನೋಂದಾಯಿಸಿಕೊಂಡಿದ್ದಾರೆ. 1,171 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ. ರಾಜ್ಯದ 5,050 ಪದವಿ ಪೂರ್ವ ಕಾಲೇಜುಗಳ 7.13 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ.

ಪರೀಕ್ಷೆ ಸಂದರ್ಭದಲ್ಲಿ ನಕಲು ಮಾಡುವುದನ್ನು ತಡೆಯಲು ಪರೀಕ್ಷಾ ಕೇಂದ್ರಗಳಲ್ಲಿ ವೆಬ್‌ ಕಾಸ್ಟಿಂಗ್ ಮಾಡಲಾಗುತ್ತದೆ. ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಪರೀಕ್ಷಾ ಕೇಂದ್ರಗಳಲ್ಲಿ ವೆಬ್ ಕಾಸ್ಟಿಂಗ್ ಮೂಲಕ ವೀಕ್ಷಣೆ ಮಾಡಲಾಗುತ್ತದೆ. ಪರೀಕ್ಷೆ ನಡೆಯುವ ಸಮಯದಲ್ಲಿ ಪರೀಕ್ಷಾ ಕೇಂದ್ರಗಳ ಸುತ್ತ 200 ಮೀಟರ್ ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಘೋಷಿಸಲಾಗುತ್ತದೆ.

ನಿಷೇಧಿತ ಪ್ರದೇಶದಲ್ಲಿ ಜೆರಾಕ್ಸ್, ಸೈಬರ್, ಕಂಪ್ಯೂಟ‌ರ್ ಸೆಂಟರ್‌ಗಳನ್ನು ಮುಚ್ಚಿಸಲು ಕ್ರಮ ಕೈಗೊಳ್ಳಲಾಗುತ್ತದೆ. ಜಿಲ್ಲೆಯಲ್ಲಿ ಪ್ರಶ್ನೆಪತ್ರಿಕೆಗಳ ಸೋರಿಕೆ ಮತ್ತು ಪರೀಕ್ಷಾ ಆಕ್ರಮಗಳಿಗೆ ಉತ್ತೇಜಿಸುವ ವ್ಯಕ್ತಿಗಳ ವಿರುದ್ಧ ಶಿಕ್ಷಣ ಕಾಯಿದೆಯ ನಿಯಮಗಳಡಿಯಲ್ಲಿ ಅಗತ್ಯವಾದ ಮುಂಜಾಗ್ರತಾ ಕ್ರಮ ತೆಗೆದುಕೊಳ್ಳಲಾಗುತ್ತದೆ.

ಪರೀಕ್ಷಾ ಕೇಂದ್ರಗಳಲ್ಲಿ ಮೊಬೈಲ್ ಫೋನ್, ಸ್ಮಾರ್ಟ್ ವಾಚ್, ಇಯರ್ ಫೋನ್ ಸೇರಿದಂತೆ ಎಲ್ಲಾ ವಿಧದ ಎಲೆಕ್ಟ್ರಾನಿಕ್ ಉಪಕರಣಗಳನ್ನು ನಿಷೇಧಿಸಲಾಗಿದೆ.

ವಿದ್ಯಾರ್ಥಿಗಳು ತಮ್ಮ ನಿವಾಸದಿಂದ ಪರೀಕ್ಷಾ ಕೇಂದ್ರಗಳಿಗೆ ಹೋಗಲು ಮತ್ತು ಮರಳಿ ಮನೆಗೆ ಬರಲು ಕೆಎಸ್‌ಆರ್‌ಟಿಸಿ ಮತ್ತು ಬಿಎಂಟಿಸಿ ಬಸ್ಸುಗಳಲ್ಲಿ ಉಚಿತ ಪ್ರಯಾಣದ ಸೌಲಭ್ಯ ಕಲ್ಪಿಸಲಾಗಿದೆ. ವಿದ್ಯಾರ್ಥಿಗಳು ಕಾಲೇಜಿನ ಗುರುತಿನ ಚೀಟಿ ಮತ್ತು ಪ್ರವೇಶಪತ್ರವನ್ನು ತೋರಿಸಿ ಪ್ರಯಾಣಿಸಬಹುದಾಗಿದೆ.

- Advertisement - Ply
Nova

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!