ಹೊಸದಿಗಂತ ಡಿಜಿಟಲ್ ಡೆಸ್ಕ್:
2024-25ನೇ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ (Second PUC) ಇಂದು ಪ್ರಕಟವಾಗಿದೆ. ರಾಜ್ಯದಲ್ಲಿ ಒಟ್ಟು 73.45% % ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.
6,81,079 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಅವರಲ್ಲಿ 4,68,439 ಮಂದಿ ತೇರ್ಗಡೆಯಾಗಿದ್ದಾರೆ. ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ 93.90% ಸಾಧನೆ ಮಾಡುವ ಮೂಲಕ ಉಡುಪಿ ಜಿಲ್ಲೆ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದೆ. ಎರಡನೇ ಸ್ಥಾನ ದಕ್ಷಿಣ ಕನ್ನಡ (93.57%), ಮೂರನೇ ಸ್ಥಾನವನ್ನು ಬೆಂಗಳೂರು ದಕ್ಷಿಣ(85.36%) ಪಡೆದುಕೊಂಡಿದೆ. ಕೊನೆ ಸ್ಥಾನ ಯಾದಗಿರಿ (73.45%) ಪಡೆದುಕೊಂಡಿದೆ.
ಫಲಿತಾಂಶ ಹೀಗೆ ನೋಡಿ..
* ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿಯ ಅಧಿಕೃತ ವೆಬ್‌ಸೈಟ್ karresults.nic.in ಗೆ ಭೇಟಿ ನೀಡಿ.
* ಸ್ಕ್ರೀನ್ ಮೇಲೆ ಕಾಣುವ 2nd PUC Result 2025 ಎಂಬಲ್ಲಿ ಕ್ಲಿಕ್ ಮಾಡಿ ಲಿಂಕ್ ಓಪನ್ ಮಾಡಿ.
* ತದನಂತರದಲ್ಲಿ ನೋಂದಣಿ ಸಂಖ್ಯೆ, ಜನ್ಮ ದಿನಾಂಕ ಮತ್ತು ಪಾಸ್ ವರ್ಡ್ ನಮೂದಿಸಿಕೊಳ್ಳಿ.
* ಆ ಬಳಿಕ ಸಬ್ಮಿಟ್ ಕೊಟ್ಟರೆ ಫಲಿತಾಂಶ ಸ್ಕ್ರೀನ್ ಮೇಲೆ ಕಾಣುತ್ತದೆ. ಈ ಪ್ರತಿಯನ್ನು ಡೌನ್ ಲೋಡ್ ಮಾಡಿಟ್ಟುಕೊಳ್ಳಬಹುದು.