ಹೊಸದಿಗಂತ ಡಿಜಿಟಲ್ ಡೆಸ್ಕ್:
ಮನೆಯ ಮಹಡಿಯಿಂದ ಆಯತಪ್ಪಿ ಕೆಳಗೆ ಬಿದ್ದು ಪಿಯುಸಿ ವಿದ್ಯಾರ್ಥಿನಿ ಸಾವನ್ನಪ್ಪಿದ ಘಟನೆ ಬೆಂಗಳೂರಿನ ಅನ್ನಪೂರ್ಣೇಶ್ವರಿ ನಗರದಲ್ಲಿ ನಡೆದಿದೆ.
ಪ್ರಿಯಾಂಕಾ (19) ಮೃತ ಯುವತಿ. ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿದ್ದ ಪ್ರಿಯಾಂಕಾ ಮನೆಯ ಎರಡನೇ ಮಹಡಿಯಿಂದ ಆಯತಪ್ಪಿ ಕೆಳಗೆ ಬಿದ್ದು ಸಾವನ್ನಪ್ಪಿದ್ದಾಳೆ.
ತನ್ನ ಅಮ್ಮ ಟೇರೆಸ್ ಮೇಲೆ ಬಟ್ಟೆ ಒಣಹಾಕುತ್ತಿದ್ದ ವಿಚಾರ ತಿಳಿದು ಟೇರೆಸ್‌ಗೆ ಹೊಗಿದ್ದಾಳೆ. ಎರಡನೇ ಮಹಡಿಗೆ ಹೋಗುತ್ತಿದ್ದಂತೆ ಮೆಟ್ಟಿಲ ಬಳಿ ಕಾಲು ಜಾರಿ ಕೆಳಗೆ ಬಿದ್ದಿದ್ದಾಳೆ. ಮೇಲಿಂದ ಬಿದ್ದ ಪರಿಣಾಮ ತೀವ್ರ ರಕ್ತಸ್ರಾವವಾಗಿ ಆಸ್ಪತ್ರೆಗೆ ಸಾಗಿಸುವ ಮಧ್ಯೆ ಸಾವನ್ನಪ್ಪಿದ್ದಾಳೆ. ಈ ಸಂಬಂಧ ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆಯಲ್ಲಿ ಯುಡಿಆರ್ ಪ್ರಕರಣ ದಾಖಲಾಗಿದೆ.