ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಮಂಗಳೂರು ಜಿಲ್ಲಾ ಕಾರಾಗೃಹದಲ್ಲಿ ಫುಡ್ ಪಾಯಿಸನ್ ಆಗಿ ಹೊಟ್ಟೆ ನೋವಿನಿಂದ ಖೈದಿಗಳು ನರಳಾಡಿರುವ ಘಟನೆ ನಡೆದಿದೆ. ಏಕಾಏಕಿ ವಾಂತಿ ಮಾಡುತ್ತಾ ಹೊಟ್ಟೆ ನೋವಿನಿಂದ ಖೈದಿಗಳು ನರಳಾಡಿದ್ದಾರೆ. ಬಳಿಕ ಪ್ರಜ್ಞಾಹೀನ ಸ್ಥಿತಿಗೆ ತಲುಪಿದ ಖೈದಿಗಳನ್ನು ಆಸ್ಪತ್ರೆಗೆ ರವಾನೆ ಮಾಡಲಾಗಿದೆ.
ಅಸ್ವಸ್ಥ ಕೈದಿಗಳನ್ನ ಸಹ ಖೈದಿಗಳು ತಾವೇ ಹೊತ್ತುತಂದಿದ್ದಾರೆ. ಅಸ್ವಸ್ಥ ಖೈದಿಗಳನ್ನು ವೆನ್ಲಾಕ್ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ.
ಇಂದು ಮಧ್ಯಾಹ್ನ ಊಟದ ಬಳಿಕ ಈ ಘಟನೆ ನಡೆದಿದೆ ಎನ್ನಲಾಗುತ್ತಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.