ತಂಡಕ್ಕೆ ಆಸರೆಯಾದ ಪೂಜಾರ- ಅಯ್ಯರ್: ಬೃಹತ್​ ಮೊತ್ತದತ್ತ ಟೀಮ್​ ಇಂಡಿಯಾ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಬಾಂಗ್ಲಾದೇಶ ವಿರುದ್ಧದ ಮೊದಲ ಟೆಸ್ಟ್‌ ಪಂದ್ಯದಲ್ಲಿ ಭಾರತ ದಿನದಾಟದ ಅಂತ್ಯಕ್ಕೆ 6 ವಿಕೆಟ್ ಕಳೆದುಕೊಂಡು 278 ರನ್ ಬಾರಿಸಿದೆ.

ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿದ ಟೀಮ್​ ಇಂಡಿಯಾ ಉತ್ತಮ ಆರಂಭ ಪಡೆಯಲು ವಿಫಲವಾಯಿತು. ಶುಭ್‌ಮನ್‌ ಗಿಲ್‌ (20) ಮತ್ತು ಹಂಗಾಮಿ ನಾಯಕ ಕೆ.ಎಲ್. ರಾಹುಲ್(22) ಬೇಗನೆ ವಿಕೆಟ್‌ ಒಪ್ಪಿಸಿ ತಂಡಕ್ಕೆ ಆಘಾತ ನೀಡಿದರು. ಇದರ ಬೆನ್ನಲ್ಲೇ ವಿರಾಟ್​ ಕೊಹ್ಲಿಯೂ ಕೇವಲ ಒಂದು ರನ್​ ಗಳಿಸಿ ನಿರಾಶೆ ಮೂಡಿಸಿದರು.

ಬಳಿಕ ಹಿರಿಯ ಆಟಗಾರ ಚೇತೇಶ್ವರ್ ಪೂಜಾರ ಮತ್ತು ರಿಷಭ್​ ಪಂತ್​ ತಂಡಕ್ಕೆ ಆಸರೆಯಾದರು. ನಾಲ್ಕನೇ ವಿಕೆಟ್‌ಗೆ 64 ರನ್‌ಗಳ ಜತೆಯಾಟವಾಡುವ ಮೂಲಕ ತಂಡದ ಮೊತ್ತವನ್ನು ಹೆಚ್ಚಿಸಲು ಶುರುಮಾಡಿದರು.

ರಿಷಭ್‌ ಪಂತ್ 45 ಎಸೆತಗಳಲ್ಲಿ 6 ಬೌಂಡರಿ ಹಾಗೂ 2 ಸಿಕ್ಸರ್ ಸಹಿತ 46 ರನ್‌ ಬಾರಿಸಿ ವಿಕೆಟ್ ಒಪ್ಪಿಸಿದರು.
ಬಳಿಕ ಜೊತೆಗೆಯಾದ ಅಯ್ಯರ್​- ಪೂಜಾರ ಉತ್ತಮ ಬ್ಯಾಟಿಂಗ್ ನಡೆಸಿದರು. ಈ ಜೋಡಿತಂಡ ಮೊತ್ತವನ್ನು 200ರ ಗಡಿ ದಾಟಿಸುವಲ್ಲಿ ಯಶಸ್ವಿಯಾದರು.

ಸಮಯೋಚಿತ ಬ್ಯಾಟಿಂಗ್ ನಡೆಸಿದ ಚೇತೇಶ್ವರ್ ಪೂಜಾರ ಕೇವಲ 10 ರನ್‌ ಅಂತರದಲ್ಲಿ ಶತಕ ವಂಚಿತರಾದರು. 90 ರನ್ ಬಾರಿಸಿ ತೈಜುಲ್ ಇಸ್ಲಾಂಗೆ ವಿಕೆಟ್​ ಒಪ್ಪಿಸಿದರು.

ಸದ್ಯ ಶ್ರೇಯಸ್ ಅಯ್ಯರ್ 169 ಎಸೆತಗಳನ್ನು ಎದುರಿಸಿ 82 ರನ್ ಬಾರಿಸಿ ಎರಡನೇ ದಿನಕ್ಕೆ ಬ್ಯಾಟಿಂಗ್ ಕಾಯ್ದುಕೊಂಡಿದ್ದಾರೆ. ಅಕ್ಷರ್ ಪಟೇಲ್ 14 ರನ್‌ ಗಳಿಸಿ ದಿನದಾಟದ ಕೊನೆಯ ಎಸೆತದಲ್ಲಿ ವಿಕೆಟ್ ಒಪ್ಪಿಸಿದರು.

ಬಾಂಗ್ಲಾ ಪರ ಮಾರಕ ಬೌಲಿಂಗ್​ ನಡೆಸಿದ ಸ್ಪಿನ್ನರ್​ ತೈಜುಲ್​ ಇಸ್ಲಾಂ 84ಕ್ಕೆ 3 ವಿಕೆಟ್​ ಕಿತ್ತು ಟೀಮ್​ ಇಂಡಿಯಾ ಬ್ಯಾಟರ್​ಗಳನ್ನು ಕಾಡಿದರು. ಉಳಿದಂತೆ ಮೆಹದಿ ಹಸನ್​ 71ಕ್ಕೆ 2 ವಿಕೆಟ್​ ಉರುಳಿಸಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!