ಫೆ.27 ರಿಂದ ಮಾ.3ರವರೆಗೆ ಪಲ್ಸ್ ಪೋಲಿಯೋ ಕಾರ್ಯಕ್ರಮ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಈ ಬಾರಿ ಫೆ.27ರಿಂದ ಮಾ.3 ರವರೆಗೆ ಪಲ್ಸ್ ಪೋಲಿಯೋ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತ ತಿಳಿಸಿದರು.

ಈ ಬಾರಿಯೂ ರಾಷ್ಟ್ರೀಯ ಪಲ್ಸ್ ಪೋಲಿಯೋ ಕಾರ್ಯಕ್ರಮದ ಶೇ.200ರಷ್ಟು ಯಶಸ್ಸಿಗೆ ಅಗತ್ಯ ಕ್ರಮ ಕೈಗೊಳ್ಳಲಾಗಿದೆ. ಕೆಲವು ನೆರೆ ರಾಷ್ಟ್ರಗಳಲ್ಲಿ ಪೋಲಿಯೋ ಪ್ರಕರಣಗಳು ಕಾಣಿಸಿಕೊಳ್ಳುತ್ತಿದೆ. ಈ ಕಾರಣದಿಂದ ನಾಳೆಯಿಂದ ಪಲ್ಸ್ ಪೋಲಿಯೋ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದಿದ್ದಾರೆ.

ಅಂಗನವಾಡಿ ಕೇಂದ್ರಗಳು, ಶಾಲೆಗಳು, ಮಾರುಕಟ್ಟೆ, ಮೆಟ್ರೋ ನಿಲ್ದಾಣ, ಉದ್ಯಾನವನಗಳು, ಕೊಳಚೆ ಪ್ರದೇಶಗಳು ಹಾಗೂ ಇನ್ನಿತರ ಜನನಿಬಿಡ ಪ್ರದೇಶಗಳಲ್ಲಿ ಮೊಬೈಲ್ ಮತ್ತು ಸ್ಥಿರ ಬೂತ್‌ಗಳನ್ನು ಸ್ಥಾಪಿಸಲಾಗುವುದು ಎಂದಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!