Tuesday, June 28, 2022

Latest Posts

ದ್ವಿದಳ ಧಾನ್ಯ, ಎಣ್ಣೆಕಾಳು ಬಿತ್ತನೆ ಬೀಜ ವಿತರಣೆಗೆ ಕೃಷಿ ಸಚಿವ ಬಿ.ಸಿ.ಪಾಟೀಲ್ ಚಾಲನೆ

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………

ಹೊಸ ದಿಗಂತ ವರದಿ, ಚಿತ್ರದುರ್ಗ:

ಪ್ರಸಕ್ತ ಸಾಲಿನ ಮುಂಗಾರು ಹಂಗಾಮಿನ ರಾಷ್ಟ್ರೀಯ ಆಹಾರ ಭದ್ರತಾ ಅಭಿಯಾನ ಯೋಜನೆಯಡಿ ದ್ವಿದಳ ಧಾನ ಮತ್ತು ಎಣ್ಣೆಕಾಳು ಬಿತ್ತನೆ ಬೀಜ ಕಿರುಚೀಲಗಳ ವಿತರಣೆಗೆ ಮಂಗಳವಾರ ಕೃಷಿ ಸಚಿವರಾದ ಬಿ.ಸಿ.ಪಾಟೀಲ್ ಚಾಲನೆ ನೀಡಿದರು.
ನಗರದ ಜಿ.ಪಂ. ಆವರಣದಲ್ಲಿ ಕೃಷಿ ಇಲಾಖೆ ವತಿಯಿಂದ ದ್ವಿದಳ ಧಾನ್ಯ ಮತ್ತು ಎಣ್ಣೆಕಾಳು ಬಿತ್ತನೆ ಬೀಜ ಕಿರುಚೀಲಗಳನ್ನು ರೈತರಿಗೆ ವಿತರಿಸಲಾಯಿತು. ಇದೇ ಸಂದರ್ಭದಲ್ಲಿ ಕೃಷಿ ಅಭಿಯಾನ ವಾಹನಕ್ಕೂ ಹಸಿರು ನಿಶಾನೆ ತೋರಿಸುವ ಮೂಲಕ ಕೃಷಿ ಸಚಿವ ಬಿ.ಸಿ.ಪಾಟೀಳ್ ಚಾಲನೆ ನೀಡಿದರು.
ಕಾರ್ಯಕ್ರಮದಲ್ಲಿ ಸಂಸದ ಎ.ನಾರಾಯಣಸ್ವಾಮಿ, ಶಾಸಕರಾದ ಜಿ.ಹೆಚ್.ತಿಪ್ಪಾರೆಡ್ಡಿ, ಟಿ.ರಘುಮೂರ್ತಿ, ಪೂರ್ಣಿಮಾ ಶ್ರೀನಿವಾಸ್, ವಿಧಾನ ಪರಿಷತ್ ಸದಸ್ಯರಾದ ವೈ.ಎ.ನಾರಾಯಣಸ್ವಾಮಿ, ಚಿದಾನಂದ ಎಂ. ಗೌಡ, ಅಪರ ಕೃಷಿ ನಿರ್ದೇಶಕ ದಿವಾಕರ್ ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ, ಜಿ.ಪಂ. ಸಿಇಒ ಡಾ.ಕೆ.ನಂದಿನಿದೇವಿ, ಜಂಟಿ ಕೃಷಿ ನಿರ್ದೇಶಕ ರಮೇಶ್‌ಕುಮಾರ್ ಸೇರಿದಂತೆ ಕೃಷಿ ಇಲಾಖೆಯ ಅಧಿಕಾರಿಗಳು ಹಾಗೂ ರೈತರು ಹಾಜರಿದ್ದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_img
spot_img
spot_img
spot_img

Don't Miss