ಹೊಸದಿಗಂತ ಡಿಜಿಟಲ್ ಡೆಸ್ಕ್:
ಕಣಿವೆ ರಾಜ್ಯ ಜಮ್ಮು ಕಾಶ್ಮೀರಕ್ಕೆ ನೀಡಲಾಗಿದ್ದ ವಿಶೇಷ ರಾಜ್ಯ ಸ್ಥಾನಮಾನವನ್ನು ರದ್ದು ಪಡಿಸಲು ಪುಲ್ವಾಮದಲ್ಲಿ ಸಿಆರ್‌ಪಿಎಫ್ ಯೋಧರ ಮೇಲೆ ನಡೆದ ವಿಧ್ವಂಸಕ ದಾಳಿಯೇ ಪ್ರೇರಣೆ ಎಂದು
ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್‌ಗೆ ತಿಳಿಸಿದೆ.
ಜಮ್ಮು ಕಾಶ್ಮೀರದ ವಿಶೇಷ ರಾಜ್ಯ ಸ್ಥಾನಮಾನ ರದ್ದುಗೊಳಿಸಿದ ಕೇಂದ್ರ ಸರ್ಕಾರದ ನಿರ್ಧಾರವನ್ನು ಪ್ರಶ್ನಿಸಿ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಕೆಯಾಗಿತ್ತು. ಈ ಅರ್ಜಿ ವಿಚಾರಣೆಯ ಸಂದರ್ಭ ಕೇಂದ್ರದ ನಿರ್ಧಾರವನ್ನು ಸಮರ್ಥಿಸಿಕೊಂಡ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ, ಆರ್ಟಿಕಲ್ 35(ಎ) ನಂತಹ ನಿಬಂಧನೆಗಳ ಪರಿಣಾಮ ಜಮ್ಮು ಕಾಶ್ಮೀರದ ನಿವಾಸಿಗಳು ತಮ್ಮ ಮೂಲಭೂತ ಹಕ್ಕುಗಳನ್ನು ಸಂಪೂರ್ಣವಾಗಿ ಅನುಭವಿಸಲು ಸಾಧ್ಯವಾಗಲಿಲ್ಲ. ಹೀಗಾಗಿ ಹಿಂದಿನ ತಪ್ಪನ್ನು ಸರಿಪಡಿಸಲು ಈ ನಿರ್ಧಾರ ತೆಗೆದುಕೊಂಡಿದೆ ಎಂದು ತಿಳಿಸಿದ್ದಾರೆ.