ಪುಲ್ವಾಮಾದಲ್ಲಿ ಬಸ್​ ಪಲ್ಟಿ : 4 ಮಂದಿ ಸಾವು, 28 ಜನರಿಗೆ ಗಾಯ

ಹೊಸದಿಗಂತ ಡಿಜಿಟಲ್‌ ಡೆಸ್ಕ್ :‌

ಜಮ್ಮು ಮತ್ತು ಕಾಶ್ಮೀರದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಬಸ್​ ಪಲ್ಟಿಯಾಗಿ 4 ಮಂದಿ ಮೃತಪಟ್ಟಿದ್ದು, 28 ಮಂದಿ ಗಾಯಗೊಂಡಿದ್ದಾರೆ.

ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ ಈ ಘಟನೆ ನಡೆದಿದ್ದು, ಬಿಹಾರ ಮೂಲದ ನಾಲ್ವರು ಮೃತಪಟ್ಟಿದ್ದಾರೆ, ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ದಕ್ಷಿಣ ಕಾಶ್ಮೀರ ಜಿಲ್ಲೆಯ ಬರ್ಸೂ ಪ್ರದೇಶದಲ್ಲಿ ಶ್ರೀನಗರ-ಜಮ್ಮು ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಪುಲ್ವಾಮಾ ಡೆಪ್ಯುಟಿ ಕಮಿಷನರ್ (ಡಿಸಿ) ಬಸೀರ್ ಉಲ್ ಹಕ್ ಪ್ರತಿ ಸಂತ್ರಸ್ತರ ಕುಟುಂಬಕ್ಕೆ ತಲಾ 1 ಲಕ್ಷ ರೂ. ಸಹಾಯವನ್ನು ಘೋಷಿಸಿದ್ದಾರೆ ಎಂದು ತಿಳಿಸಿದ್ದಾರೆ.

ತೀವ್ರವಾಗಿ ಗಾಯಗೊಂಡವರಿಗೆ 25,000 ರೂ. ಮತ್ತು ಸಣ್ಣಪುಟ್ಟ ಗಾಯಗೊಂಡವರಿಗೆ 10,000 ರೂ. ಪರಿಹಾರವನ್ನು ಹಕ್ ಘೋಷಿಸಿದ್ದಾರೆ ಎಂದು ಅವರು ಹೇಳಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!