ಕುಂಬಳೆ ಪೆರುವಾಡು ಭಜನಾ ಮಂದಿರ ಜೀರ್ಣೋದ್ಧಾರ: ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ನೆರವು

ಹೊಸದಿಗಂತ ಡಿಜಿಟಲ್ ಡೆಸ್ಕ್: 

ಮಂಜೇಶ್ವರ ತಾಲೂಕಿನ ಕುಂಬಳೆ ಪೆರುವಾಡು ಶ್ರೀ ಅಯ್ಯಪ್ಪ ಸ್ವಾಮಿ ಭಜನಾ ಮಂದಿರದ ಜೀರ್ಣೋದ್ಧಾರ ಕಾಮಗಾರಿಗೆ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಅವರು ಮಂಜೂರುಗೊಳಿಸಿದ 1.50 ಲಕ್ಷ ರೂ. ಸಹಾಯ ಧನವನ್ನು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಸಮುದಾಯ ಅಭಿವೃದ್ಧಿ ವಿಭಾಗದ ಪ್ರಾದೇಶಿಕ ನಿರ್ದೇಶಕ ಆನಂದ ಸುವರ್ಣ ಭಜನಾ ಮಂಡಳಿಯ ಆಡಳಿತ ಸಮಿತಿ ಸದಸ್ಯರಿಗೆ ಹಸ್ತಾಂತರಿಸಿದರು.

ಈ ಸಂದರ್ಭದಲ್ಲಿ ಸಮುದಾಯ ಅಭಿವೃದ್ಧಿ ವಿಭಾಗದ ತಾಂತ್ರಿಕ ಯೋಜನಾಧಿಕಾರಿ ಪುಷ್ಪರಾಜ್, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಾಸರಗೋಡು ಯೋಜನಾಧಿಕಾರಿ ಮುಖೇಶ್, ಕುಂಬಳೆ ವಲಯ ಮೇಲ್ವಿಚಾರಕ ರಮೇಶ್, ಸೇವಾ ಪ್ರತಿನಿಧಿ ಸಂಧ್ಯಾ ಉಪಸ್ಥಿತರಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!