ಪಂಪ್‌ವೆಲ್ ರಸ್ತೆ ಮಧ್ಯೆ ದಿಢೀರ್ ಬಿರುಕು: ಟ್ರಾಫಿಕ್ ಜಾಮ್ ಗೆ ಮಂಗಳೂರು ಹೈರಾಣ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ನಗರದ ಪಂಪ್‌ವೆಲ್ ಮೇಲ್ಸೇತುವೆ ಸಮೀಪ ಬಸ್ಸು ನಿಲುಗಡೆಯಾಗುವ ರಸ್ತೆಯಲ್ಲಿ ದಿಢೀರ್ ಬಿರುಕು ಕಾಣಿಸಿಕೊಂಡಿದ್ದು, ಒಳಗಡೆಯಿಂದ ಭಾರೀ ಪ್ರಮಾಣದಲ್ಲಿ ನೀರು ಹೊರಚಿಮ್ಮುತ್ತಿದೆ.
ಬಿರುಕು ಬಿಟ್ಟಿರುವ ಪರಿಣಾಮ ಭಾರೀ ಪ್ರಮಾಣದಲ್ಲಿ ನೀರು ರಸ್ತೆಯಲ್ಲೆಲ್ಲಾ ಹರಿದಾಡುತ್ತಿದೆ. ವಾಹನ ಸಂಚಾರ ಅಸ್ತವ್ಯಸ್ತಗೊಂಡಿದೆ.
ರಸ್ತೆಯ ಕೆಳಭಾಗದಲ್ಲಿರುವ ನೀರು ಸರಬರಾಜಿನ ಪೈಪ್ ಒಡೆದಿದ್ದರಿಂದ ರಸ್ತೆ ಮಧ್ಯೆ ಬಿರುಕು ಮೂಡಿದೆ ಎನ್ನಲಾಗುತ್ತಿದ್ದು, ಕಂಕನಾಡಿಯಿಂದ ಪಡೀಲ್‌ಗೆ ಹೋಗುವ ರಸ್ತೆಯಲ್ಲಿ ಈ ಘಟನೆ ಸಂಭವಿಸಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!