‘ಪುನರ್ವಸು’ ಭರ್ಜರಿ ಎಂಟ್ರಿ: ರಾಜ್ಯದಲ್ಲಿ ಹಲವು ಜಿಲ್ಲೆಗಳಿಗೆ ರೆಡ್ ಅಲರ್ಟ್

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಕರ್ನಾಟಕ ವಿವಿಧ ಜೆಲೆಗಳಲ್ಲಿ ಭಾರಿ ಮಳೆಯಾಗುತ್ತಿದೆ. ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದೆ. ಕರಾವಳಿ ಭಾಗಗಳಲ್ಲಿ ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿದೆ.
ಇತ್ತ ಗ್ರಾಮೀಣ ಪ್ರದೇಶಗಳಲ್ಲಿ ಭೂಕುಸಿತ, ಗುಡ್ಡ ಕುಸಿತದ ಹೆಚ್ಚುತ್ತಿದ್ದು, ತಗ್ಗು ಪ್ರದೇಶಗಳು ಜಲಾವೃತಗೊಂಡಿವೆ.
ಮುಂದಿನ ೨೪ ಗಂಟೆಗಳಲ್ಲಿ ಮಲೆನಾಡು, ಕರಾವಳಿ ಸೇರಿದಂತೆ ರಾಜ್ಯದ 15ಕ್ಕೂ ಅಧಿಕ ಜಿಲ್ಲೆಗಳಲ್ಲಿ ಮುಂಗಾರು ಮಳೆ ಅಬ್ಬರಿಸಿದ್ದು, ನಿರಂತರವಾಗಿ ಮಳೆಯ ಸುರಿಯುತ್ತಿರುವ ಕಾರಣ ದಕ್ಷಿಣ ಕನ್ನಡ, ಉಡುಪಿ, ಉತ್ತರಕನ್ನಡ ಜಿಲ್ಲೆಗಳಿಗೆ ಬುಧವಾರ ರೆಡ್ ಅಲರ್ಟ್ ಘೋಷಿಸಲಾಗಿದೆ.
ನಾಳೆಯೂ ಚಿಕ್ಕಮಗಳೂರು, ಕೊಡಗು ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!