ಸೆಫ್ಟಿಕ್‌ ಚೇಂಬರ್‌ ಸ್ವಚ್ಛಗೊಳಿಸಲು ಹೋದ ಇಬ್ಬರು ಸಾವು, ಓರ್ವ ನಾಪತ್ತೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್: 

ಸೆಪ್ಟಿಕ್ ಚೇಂಬರ್‌ ಸ್ವಚ್ಛಗೊಳಿಸಲು ಹೋದ ಇಬ್ಬರು ನೈರ್ಮಲ್ಯ ಕಾರ್ಮಿಕರು ಪ್ರಾಣ ಕಳೆದುಕೊಂಡಿದ್ದರೆ, ಒಬ್ಬರು ನಾಪತ್ತೆಯಾಗಿರುವ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ನಡೆದಿದೆ. ಕಾರ್ಮಿಕರು ಹೌಸಿಂಗ್ ಸೊಸೈಟಿಯ ಸೆಪ್ಟಿಕ್ ಚೇಂಬರ್ ಅನ್ನು ಸ್ವಚ್ಛಗೊಳಿಸುತ್ತಿದ್ದಾಗ ಈ ದುರಂತ ಘಟನೆ ಸಂಭವಿಸಿದೆ.

ಪುಣೆ ಮೆಟ್ರೋಪಾಲಿಟನ್ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ (ಪಿಎಂಆರ್‌ಡಿಎ) ಅಧಿಕಾರಿಗಳ ಪ್ರಕಾರ, ಈ ಮೂವರು ಪುಣೆಯ ವಘೋಲಿ ಪ್ರದೇಶದಲ್ಲಿ ಖಾಸಗಿ ಸೊಸೈಟಿಯ ಸೆಪ್ಟಿಕ್ ಚೇಂಬರ್ ಅನ್ನು ಯಾವುದೇ ಪರಿಕರಗಳಿಲ್ಲದೆ ಕೈಯಿಂದ ಸ್ವಚ್ಛಗೊಳಿಸುತ್ತಿದ್ದರು ಎನ್ನಲಾಗಿದೆ.
ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!