ಪುಣೆಯ ವಿಮಾನ ನಿಲ್ದಾಣಕ್ಕೆ ‘ಜಗದ್ಗುರು ಸಂತ ತುಕಾರಾಮ್‌ ಮಹಾರಾಜ’ ಹೆಸರು!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಪುಣೆಯ ವಿಮಾನ ನಿಲ್ದಾಣಕ್ಕೆ ‘ಜಗದ್ಗುರು ಸಂತ ತುಕಾರಾಮ್‌ ಮಹಾರಾಜ’ ಪುಣೆ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ’ ಎಂದು ಹೆಸರಿಡುವ ಪ್ರಸ್ತಾವಕ್ಕೆ ಮಹಾರಾಷ್ಟ್ರ ಸರ್ಕಾರ ಸೋಮವಾರ ಅನುಮೋದನೆ ನೀಡಿದೆ.

ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಕೇಂದ್ರ ಸರ್ಕಾರಕ್ಕೆ ಪ್ರಸ್ತಾವ ಕಳುಹಿಸಲಾಗುವುದು ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಪುಣೆಯ ಸಂಸದರೂ ಆಗಿರುವ ಕೇಂದ್ರ ನಾಗರಿಕ ವಿಮಾನಯಾನ ಖಾತೆಯ ರಾಜ್ಯ ಸಚಿವ ಮುರಳೀಧರ್ ಮೊಹೋಲ್ ಸಲ್ಲಿಸಿದ್ದ ಪ್ರಸ್ತಾವಕ್ಕೆ ಸರ್ಕಾರ ಅನುಮೋದನೆ ನೀಡಿದೆ.

ಸಂತ ತುಕಾರಾಮರು ಪುಣೆ ಜಿಲ್ಲೆಯಲ್ಲಿ ಜನಿಸಿದ್ದರು.

- Advertisement - Skool Shine
Prestige

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!