ಪಾಕಿಸ್ತಾನ್ ಜಿಂದಾಬಾದ್ ಎಂದ ಪಿಎಫ್ಐ ಕಾರ್ಯಕರ್ತರು- ಎಎನ್ಐ ವರದಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್ 
ದೇಶದಲ್ಲಿದ್ದುಕೊಂಡೇ ಗಲಭೆ, ಉಗ್ರವಾದ, ಜಿಹಾದ್‌ ಪೋಷಿಸುತ್ತಿದ್ದ ಮೂಲಭೂತವಾದಿ ಇಸ್ಲಾಮಿಕ್‌ ಸಂಘಟನೆ  ಪಿಎಫ್‌ಐ ಘಟಕಗಳ ಮೇಲೆ ಭಾರತೀಯ ಗುಪ್ತಚರ ಸಂಸ್ಥೆಯ ಅಧಿಕಾರಿಗಳು ವ್ಯವಸ್ಥಿತ ದಾಳಿ ನಡೆಸಿ 100 ಕ್ಕೂ ಹೆಚ್ಚು ಸದಸ್ಯರ ಹೆಡೆಮುರಿ ಕಟ್ಟಿದ್ದಾರೆ. ಅಧಿಕಾರಿಗಳ ದಾಳಿಯಿಂದ ಕಂಗಾಲಾಗಿರುವ ಸಂಘಟನೆ ಪ್ರತಿಭಟನೆಯ ಹೆಸರಿನಲ್ಲಿ ವಿಧ್ವಂಸಕ ಕೃತ್ಯಗಳಿಗೆ ಇಳಿದಿದೆ. ಪುಣೆಯಲ್ಲಿ ನಡೆದ ಪ್ರತಿಭಟನಾ ಮೆರವಣಿಗೆ ವೇಳೆ ʼಪಾಕಿಸ್ತಾನ್ ಜಿಂದಾಬಾದ್ ಘೋಷಣೆʼಗಳನ್ನು ಕೂಗುವ ಮೂಲಕ ಸಂಘಟನೆ ಮತ್ತೊಂದು ಹೇಯ ಕೃತ್ಯವನ್ನು ಎಸಗಿದೆ.

ಹಲವಾರು ರಾಜ್ಯಗಳಲ್ಲಿ ತನ್ನ ಸದಸ್ಯರ ಬಂಧನವನ್ನು ವಿರೋಧಿಸಿ ಪಿಎಫ್‌ಐ ಸದಸ್ಯರು ಪುಣೆಯ ಜಿಲ್ಲಾಧಿಕಾರಿ ಕಚೇರಿಯ ಹೊರಗೆ ಜಮಾಯಿಸಿದ್ದರು. ಪ್ರತಿಭಟನೆಯ ವೇಳೆ ಪಿಎಫ್‌ಐ ಸದಸ್ಯರು ‘ಪಾಕಿಸ್ತಾನ್ ಜಿಂದಾಬಾದ್’ ಎಂಬ ಘೋಷಣೆಗಳನ್ನು ಕೂಗಿ ಪುಂಡಾಟ ಮೆರೆದಿದ್ದಾರೆ. ಭಾರತ ವಿರೋಧಿ ಘೋಷಣೆಯ ಜೊತೆಗೆ ಅವರು ಪ್ರತಿಭಟನೆಯ ಸಮಯದಲ್ಲಿ ‘ಅಲ್ಲಾಹು ಅಕ್ಬರ್’ ಮತ್ತು ‘ನಾರಾ ಇ ತಕ್ಬೀರ್’ ನಂತಹ ಇಸ್ಲಾಮಿಕ್ ಘೋಷಣೆಗಳನ್ನು ಸಹ ಕೂಗಿದ್ದಾರೆ.  ತಕ್ಷಣವೇ ಅಲರ್ಟ್‌ ಆದ ಪೊಲೀಸರು 41 ಪುಂಡರನ್ನು ಬಂಧಿಸಿ ಪೊಲೀಸ್ ವಾಹನಗಳಲ್ಲಿ ಸ್ಥಳದಿಂದ ಕರೆದೊಯಿದ್ದಾರೆ. ಕಾನೂನುಬಾಹಿರವಾಗಿ ಜಿಲ್ಲಾಧಿಕಾರಿ ಕಚೇರಿ ಎದುರು ಜಮಾಯಿಸಿದ್ದಕ್ಕಾಗಿ 70 ಮಂದಿಯ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ ಎಂದು ಎಎನ್‌ ಐ ಸುದ್ಧಿ ಸಂಸ್ಥೆ ವರದಿ ಮಾಡಿದೆ. ಶುಕ್ರವಾರ ಕೇರಳದಲ್ಲಿ ಪಿಎಫ್‌ಐ ಕಾರ್ಯಕರ್ತರಿಂದ ಕಲ್ಲು ತೂರಾಟದ ಹಲವು ಪ್ರಕರಣಗಳು ದಾಖಲಾಗಿವೆ. ಎರಡು ಟ್ರಕ್‌ಗಳು ಹಾಗೂ ಎರಡು ಕೇರಳ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ (ಕೆಎಸ್‌ಆರ್‌ಟಿಸಿ) ವಾಹನಗಳ ಗಾಜುಗಳಿಗೆ ಹಾನಿಯಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!