October 11, 2026
Sunday, October 11, 2026
spot_img

ಪುಣೆ ಪೊಲೀಸರ ಕಾರ್ಯಾಚರಣೆ: ಅಕ್ರಮವಾಗಿ ವಾಸಿಸುತ್ತಿದ್ದ 11 ಬಾಂಗ್ಲಾ ಮಹಿಳೆಯರ ಬಂಧನ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಮಹಾರಾಷ್ಟ್ರದ ಪುಣೆಯಲ್ಲಿ ಅಕ್ರಮವಾಗಿ ವಾಸಿಸುತ್ತಿದ್ದ 11 ಬಾಂಗ್ಲಾದೇಶಿ ಮಹಿಳೆಯರನ್ನು ಪೊಲೀಸರು ಬಂಧಿಸಿದ್ದಾರೆ.

ನಗರದ ಬುಧವಾರ್ ಪೇಟ್‌ನ “ರೆಡ್ ಲೈಟ್ ಏರಿಯಾ”ದಲ್ಲಿ ಶೋಧ ಕಾರ್ಯಾಚರಣೆ ವೇಳೆ 11 ಬಾಂಗ್ಲಾದೇಶಿ ಮಹಿಳೆಯರು ಸೇರಿದಂತೆ 22 ಮಹಿಳೆಯರನ್ನು ಬಂಧಿಸಲಾಗಿದೆ. ನಕಲಿ ಆಧಾರ್ ಕಾರ್ಡ್‌ಗಳು ಮತ್ತು ಇತರ ವಸತಿ ದಾಖಲೆಗಳು ಪತ್ತೆಯಾಗಿವೆ.

ಉಪ ಪೊಲೀಸ್ ಆಯುಕ್ತ ಕ್ರುಶಿಕೇಶ್ ರಾವಾಲೆ ಮಾಹಿತಿ ನೀಡಿದ್ದು, 22 ಮಹಿಳೆಯರನ್ನು ಬಂಧಿಸಿದ್ದೇವೆ. ಅವರಲ್ಲಿ 11 ಮಂದಿ ಬಾಂಗ್ಲಾದೇಶಿ ಪ್ರಜೆಗಳಾಗಿದ್ದು, ಅವರು ಕಳೆದ ಕೆಲವು ತಿಂಗಳುಗಳಿಂದ ನಮ್ಮ ನಗರದಲ್ಲಿ ಅಕ್ರಮವಾಗಿ ವಾಸಿಸುತ್ತಿದ್ದಾರೆ ಎಂದು ಕಂಡುಬಂದಿದೆ. ಈ ಬಗ್ಗೆ ಹೆಚ್ಚಿನ ತನಿಖೆ ನಡೆಸುತ್ತಿದ್ದೇವೆ ಎಂದು ಅವರು ಹೇಳಿದ್ದಾರೆ.

Must Read