ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಹಾರಾಷ್ಟ್ರದ ಪುಣೆಯ ಬಳಿಯ ಮಾವಲ್ ತಾಲೂಕಿನ ದೇಹು ಯಾತ್ರಾ ಸ್ಥಳದ ಸಮೀಪವಿರುವ ಇಂದ್ರಯಾಣಿ ನದಿಗೆ ಅಡ್ಡಲಾಗಿ ನಿರ್ಮಿಸಲಾದ ಕಬ್ಬಿಣದ ಸೇತುವೆ ಭಾನುವಾರ ಏಕಾಏಕಿ ಕುಸಿದು, ಕನಿಷ್ಠ ಆರು ಮಂದಿ ಪ್ರವಾಸಿಗರು ಮೃತಪಟ್ಟಿದ್ದು, 20 ರಿಂದ 25 ಪ್ರವಾಸಿಗರು ಕೊಚ್ಚಿ ಹೋದ ದಾರುಣ ಘಟನೆ ನಡೆದಿದೆ.
ಸೇತುವೆಯ ಮೇಲೆ ಸುಮಾರು 25ರಿಂದ 30 ಮಂದಿ ಜನರು ನಿಂತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ. ಮೃತರ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಇದೆ ಎಂದು ರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡುತ್ತಿವೆ. ಘಟನೆಯ ಸಮಯದಲ್ಲಿ ಸ್ಥಳದಲ್ಲಿ ಭಾರೀ ಜನಸಂದಣಿ ಇದ್ದಿದ್ದರಿಂದ ಕೆಲವರು ನದಿಗೆ ಬಿದ್ದು ಕೊಚ್ಚಿ ಹೋಗಿದ್ದಾರೆ.
ಭಾರೀ ಮಳೆಯಿಂದಾಗಿ ನದಿಯಲ್ಲಿ ಪ್ರವಾಹ ಹೆಚ್ಚಾಗಿದ್ದು, ಈ ಕಾರಣದಿಂದಾಗಿ ಸೇತುವೆ ಕುಸಿದಿರುವ ಶಂಕೆ ವ್ಯಕ್ತವಾಗಿದೆ. NDRF, ಪೊಲೀಸರು ಹಾಗೂ ಸ್ಥಳೀಯ ವಿಪತ್ತು ನಿರ್ವಹಣಾ ತಂಡಗಳು ಶೋಧ ಮತ್ತು ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದ್ದು, ಈವರೆಗೆ 8 ಮಂದಿಯನ್ನು ಜೀವಂತವಾಗಿ ರಕ್ಷಿಸಲಾಗಿದೆ. ಇನ್ನೂ ಕೆಲವರು ಸೇತುವೆ ಅವಶೇಷಗಳಡಿ ಸಿಕ್ಕಿಹಾಕಿರುವ ಸಾಧ್ಯತೆ ಇದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.