Sunday, April 18, 2021

Latest Posts

ಕೊರೋನಾ ಲಸಿಕೆ ಸ್ವೀಕರಿಸಿದ ಪುನೀತ್ ರಾಜ್‍ಕುಮಾರ್,ಜಗ್ಗೇಶ್

ಹೊಸದಿಗಂತ ಆನ್ ಲೈನ್ ಡೆಸ್ಕ್:

ರಾಜ್ಯದಲ್ಲಿ ಕೊರೋನಾ ಎರಡನೇ ಅಲೆ ಹೆಚ್ಚಾಗುತ್ತಿದ್ದು, ಇದರ ನಡುವೆ ಜನರು ಲಸಿಕೆ ಪಡೆಯುತ್ತಿದ್ದಾರೆ. ಈಗಾಗಲೇ ಕೇಂದ್ರ ಸರ್ಕಾರ 45 ವರ್ಷ ಮೇಲ್ಪಟ್ಟ ಪ್ರತಿಯೊಬ್ಬರು ಲಸಿಕೆ ಪಡೆಯುವಂತೆ ಸೂಚಿಸಿದೆ.

ಕನ್ನಡ ಚಿತ್ರರಂಗದ ಹಿರಿಯ ನಟ ಅನಂತ್ ನಾಗ್, ನಿರ್ದೇಶಕ ನಾಗತಿಹಳ್ಳಿ ಚಂದ್ರಶೇಖರ್ ಸೇರಿದಂತೆ ಹಲವು ತಾರೆಯರು ಕೊರೋನಾ ಲಸಿಕೆ ಪಡೆದಿದ್ದರು. ಇಂದು ಪವರ್​ಸ್ಟಾರ್​ ಪುನೀತ್ ರಾಜ್‍ಕುಮಾರ್ ಮತ್ತು ಪತ್ನಿ ಅಶ್ವಿನಿ ಜೊತೆಗೆ ಮಲ್ಲೇಶ್ವರಂ, ಕೆ. ಸಿ ಜನರಲ್ ಆಸ್ಪತ್ರೆಯಲ್ಲಿ ಲಸಿಕೆ ಪಡೆದಿದ್ದಾರೆ.


ನವರಸ ನಾಯಕ ಜಗ್ಗೇಶ್ ಮತ್ತು ಪತ್ನಿ ಪರಿಮಳ ಕೂಡ, ಮಲ್ಲೇಶ್ವರಂ ನಾರಾಯಣ ಸೂಪರ್ ಸ್ಪೆಷಲಿಟಿ ಆಸ್ಪತ್ರೆಯಲ್ಲಿ ಕೊರೋನಾ ಲಸಿಕೆ ಪಡೆದಿದ್ದಾರೆ. ಇದರ ಜೊತೆಗೆ ನಟ ಶರಣ್ ಕೂಡ ಆಸ್ಪತ್ರೆಯೊಂದರಲ್ಲಿ ಲಸಿಕ ಹಾಕಿಸಿಕೊಂಡಿದ್ದಾರೆ.

ಸುದ್ದಿ ಇಷ್ಟವಾಯ್ತಾ, ಇತರರಿಗೂ ಶೇರ್ ಮಾಡಿ, ಓದಿಸಿ.

Whatsapp Group
Telegram

Latest Posts

spot_imgspot_img

Don't Miss