ನಟ ಡಾ. ಪುನೀತ್ ರಾಜ್‍ಕುಮಾರ್ ಗೆ ಮರಣೋತ್ತರ ಸಹಕಾರ ರತ್ನ ಪ್ರಶಸ್ತಿ

ಹೊಸದಿಗಂತ ವರದಿ, ಮೈಸೂರು
ಚಿತ್ರ ನಟ ಪವರ್ ಸ್ಟಾರ್ ಡಾ. ಪುನಿತ್ ರಾಜ್‌ಕುಮಾರ್ ಅವರಿಗೆ ನೀಡಲಾಗಿರುವ ಈ ಸಾಲಿನ ಮರಣೋತ್ತರ ಸಹಕಾರ ರತ್ನ ಪ್ರಶಸ್ತಿಯನ್ನು ಬೆಂಗಳೂರಿನ ಸದಾಶಿವನಗರದಲ್ಲಿನ ಪುನೀತ್ ಅವರ ನಿವಾಸದಲ್ಲಿ ಪತ್ನಿ ಅಶ್ವಿನಿ ಪುನೀತ್ ರಾಜ್‍ಕುಮಾರ್ ಅವರಿಗೆ ಪ್ರದಾನ ಮಾಡಿ, ಸನ್ಮಾನಿಸಲಾಯಿತು.
ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್, ರಾಜ್ಯ ಸಹಕಾರ ಮಹಾಮಂಡಳ ಅಧ್ಯಕ್ಷರಾದ ಮೈಸೂರಿನ ಚಾಮುಂಡೇಶ್ವರಿ ಕ್ಷೇತ್ರದ ಶಾಸಕ ಜಿ.ಟಿ.ದೇವೇಗೌಡ, ವ್ಯವಸ್ಥಾಪಕ ನಿರ್ದೇಶಕ ಅರುಣ್ ಕುಮಾರ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here