ಹೊಸದಿಗಂತ ಡಿಜಿಟಲ್ ಡೆಸ್ಕ್:
ಈ ಬಾರಿ ಬಜೆಟ್‌ನಲ್ಲಿ ನಟ ಪುನೀತ್ ರಾಜ್‌ಕುಮಾರ್ ಹಾಗೂ ಸಂಚಾರಿ ವಿಜಯ್ ಅವರನ್ನು ನೆನಪಿಸಿಕೊಳ್ಳಲಾಗಿದೆ.ಈ ಇಬ್ಬರು ಕಲಾವಿದರು ನಿಧನರಾದಾಗ ಸಾರ್ಥಕ ಕೆಲಸಗಳನ್ನು ಮಾಡಿದ್ದು, ಈ ಸೇವೆಯನ್ನು ಪರಿಗಣಿಸಿ ಸಾರ್ವಜನಿಕರಿಗೆ ಪ್ರೇರೇಪಣೆ ಸಿಗುವ ಯೋಜನೆಯೊಂದನ್ನು ರೂಪಿಸಲಾಗುತ್ತಿದೆ.
ಪುನೀತ್ ರಾಜ್‌ಕುಮಾರ್ ಅವರು ನಿಧನರಾದಾಗ ಅವರ ಕಣ್ಣುಗಳನ್ನು ದಾನ ಮಾಡಲಾಯಿತು, ಇನ್ನು ಸಂಚಾರಿ ವಿಜಯ್ ಅವರ ಅಂಗಾಂಗ ದಾನ ಮಾಡಲಾಗಿತ್ತು.
ಮರಣಾನಂತರ ಕಣ್ಣು ಹಾಗೂ ದೇಹದಾನದ ಕುರಿತು ಜಾಗೃತಿ ಹಾಗೂ ಪ್ರೇರೇಪಿಸಲಾಗುವುದು. ಇದಕ್ಕಾಗಿ ಈಗಾಗಲೇ ಬೆಂಗಳೂರಿನಲ್ಲಿರುವ ಇನ್ಸ್ಟಿಟ್ಯೂಟ್ ಆಫ್ ಗ್ಯಾಸ್ಟ್ರೋಎಂಟೆರೊಲಜಿ ಆಂಡ್ ಆರ್ಗನ್ ಟ್ರಾನ್ಸ್‌ಪ್ಲಾಂಟ್ ಸಂಸ್ಥೆಯನ್ನು ಲೋಕಾರ್ಪಣೆ ಮಾಡಿದ್ದು, ಪ್ರಸಕ್ತ ಸಾಲಿನಲ್ಲಿ ನಿಮ್ಹಾನ್ಸ್ ಮೂಲಕ ಅಂಗಾಂಗ ಮರುಪಡೆಯುವಿಕೆ ಕೇಂದ್ರ ಪ್ರಾರಂಭಿಸಲಾಗುವುದು ಎಂದು ಬಜೆಟ್‌ನಲ್ಲಿ ಘೋಷಿಸಲಾಗಿದೆ.