ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯದಲ್ಲಿ ಮುಂದಿನ ತಿಂಗಳು ಹೃದಯ ಜ್ಯೋತಿ ಯೋಜನೆ ಜಾರಿಯಾಗಲಿದೆ. ಈ ಮೂಲಕ ಹೃದಯಾಘತಕ್ಕೆ ಒಳಗಾದವರಿಗೆ ಸೂಕ್ತ ಕಾಲದಲ್ಲಿ ಚಿಕಿತ್ಸೆ ದೊರೆಯುವಂತೆ ಆಗಲಿದೆ.
ಈ ಬಗ್ಗೆ ವಿಕಾಸಸೌಧದಲ್ಲಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮಾತನಾಡಿ, ಸಿಎಂ ಸಿದ್ಧರಾಮಯ್ಯ ಅವರು ಪುನೀತ್ ಹೃದಯ ಜ್ಯೋತಿ ಯೋಜನೆಯನ್ನು ಬಜೆಟ್ ನಲ್ಲಿ ಘೋಷಣೆ ಮಾಡಿದ್ದಾರೆ.ಆ ಯೋಜನೆಯನ್ನು ಇದೀಗ ಮುಂದಿನ ತಿಂಗಳು ಜಾರಿಗೊಳಿಸಲಾಗುತ್ತಿದೆ ಎಂದರು.
ಮುಂದಿನ ತಿಂಗಳು ಜಾರಿಗೊಳ್ಳುತ್ತಿರುವಂತ ಪುನೀತ್ ಹೃದಯ ಜ್ಯೋತಿ ಯೋಜನೆ ಅಡಿಯಲ್ಲಿ ಹೃದಯಾಘಾತ ಆದಾಗ ಸಮಯಕ್ಕೆ ಸರಿಯಾಗಿ ಚಿಕಿತ್ಸೆ ಸಿಗುವಂತೆ ಮಾಡಲಾಗುತ್ತದೆ. ಈ ಮೂಲಕ ಸಾವಿನ ಪ್ರಮಾಣ ಕಡಿಮೆ ಮಾಡೋ ನಿಟ್ಟಿನಲ್ಲಿ ಕ್ರಮ ವಹಿಸಲಾಗುತ್ತದೆ ಎಂದು ಹೇಳಿದರು.
ರಾಜ್ಯದ 75 ತಾಲ್ಲೂಕು ಆಸ್ಪತ್ರೆಗಳಲ್ಲಿ SPOK ಹಬ್ ತೆರೆಯಲಾಗುತ್ತಿದೆ. ಇಲ್ಲಿ ಕ್ರಿಕಿಟಕ್ ಆಗಿದ್ದರೆ ಟೆನೆಕ್ಷೆಪ್ಲೇಸ್ ಇಂಜೆಕ್ಷನ್ ಕೊಡಲಾಗುತ್ತದೆ. ಇದು ಹಠಾತ್ ಹೃದಯಾಘಾತ ಆಗುವುದನ್ನು ತಡೆಯುತ್ತದೆ. ಕ್ರಿಟಿಕಲ್ ಇದ್ರೇ ಜಿಲ್ಲಾಸ್ಪತ್ರೆ, ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ಕರೆದುಕೊಂಡು ಹೋಗೋದಕ್ಕೆ ಸೂಚಿಸಲಾಗುತ್ತದೆ ಎಂದರು.