ಹೊಸದಿಗಂತ ಡಿಜಿಟಲ್ ಡೆಸ್ಕ್:
14 ಕ್ರಿಮಿನಲ್ ಪ್ರಕರಣಗಳಲ್ಲಿ ಆರೋಪ ಎದುರಿಸುತ್ತಿರುವ ಗೋರಕ್ಷಕ, ಹಿಂದೂ ಹೋರಾಟಗಾರ ಪುನೀತ್ ಕೆರೆಹಳ್ಳಿಯನ್ನು ಬಸವನಗುಡಿ ಪೊಲೀಸರು ಬಂಧನಕ್ಕೊಳಪಡಿಸಿದ್ದಾರೆ.
ಕಾನೂನುಬಾಹಿರ ಚಟುವಟಿಕೆಗಳಲ್ಲಿ ತೊಡಗದಂತೆ ತಡೆಯಲು ಮುನ್ನೆಚ್ಚರಿಕೆ ಕ್ರಮವಾಗಿ ಪೊಲೀಸರು ಪುನೀಕ್ ಕೆರೆಹಳ್ಳಿಯನ್ನು ಬಿಎನ್‌ಎಸ್‌ಎಸ್‌ನ ಸೆಕ್ಷನ್ 127 ರ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ದಕ್ಷಿಣ ವಿಭಾಗದ ವಿಶೇಷ ಕಾರ್ಯನಿರ್ವಾಹಕ ಮ್ಯಾಜಿಸ್ಟ್ರೇಟ್ ಮುಂದೆ ಹಾಜರುಪಡಿಸಿದರು.
ಇನ್ನು ಮುಂದೆ ಯಾವುದೇ ಅಪರಾಧ ಚಟುವಟಿಕೆಗಳಲ್ಲಿ ಭಾಗಿಯಾಗುವುದಿಲ್ಲ, ಸಾರ್ವಜನಿಕ ಶಾಂತಿ ಮತ್ತು ಸಾಮರಸ್ಯವನ್ನು ಭಂಗಗೊಳಿಸುವುದಿಲ್ಲ ಅಥವಾ ಸಮಾಜಕ್ಕೆ ಅಪಾಯವನ್ನುಂಟು ಮಾಡುವುದಿಲ್ಲ ಎಂದು ಖಾತರಿಪಡಿಸುವ ಬಾಂಡ್ ಸಲ್ಲಿಸುವಂತೆ ದಂಡಾಧಿಕಾರಿಗಳು ಸೂಚನೆ ನೀಡಿದರು.
ಆದರೆ, ಮುಚ್ಚಳಿಕೆ ಬರೆದುಕೊಡಲು ಪುನೀತ್ ಕೆರೆಹಳ್ಳಿಯವರು ನಿರಾಕರಿಸಿದ್ದರಿಂದ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಆದೇಶಿಸಿದ್ದಾರೆ.