ಹೊಸದಿಗಂತ ಡಿಜಿಟಲ್ ಡೆಸ್ಕ್:
ನಟ ಪುನೀತ್ ರಾಜ್ಕುಮಾರ್ ಅವರಿಗೆ ಬಸವಶ್ರೀ ಪ್ರಶಸ್ತಿ ಘೋಷಿಸಲಾಗಿದೆ.
2022 ನೇ ಸಾಲಿನ ಬಸವಶ್ರೀ ಪ್ರಶಸ್ತಿಯನ್ನು ಮುರುಘಾ ಮಠದ ಪೀಠಾಧಿಪತಿ ಡಾ.ಶಿವಮೂರ್ತಿಯವರು ಪುನೀತ್ ಅವರಿಗೆ ನೀಡುವುದಾಗಿ ಘೋಷಣೆ ಮಾಡಿದ್ದಾರೆ.
ಮುಂದಿನ ಬಸವ ಜಯಂತಿ ದಿನದಂದು ಪ್ರಶಸ್ತಿ ಪ್ರದಾನ ಮಾಡಲಾಗುವುದು. ಮುರುಘಾಮಠದ ಅನುಭವ ಮಂಟಪದಲ್ಲಿ ಪ್ರಶಸ್ತಿ ಪ್ರದಾನ ಮಾಡಲಿದ್ದು, ಪುನೀತ್ ಅವರ ಪತ್ನಿ ಅಶ್ವಿನಿ ಅವರಿಗೆ ಬಸವಶ್ರೀ ಪ್ರಶಸ್ತಿ ನೀಡಿ ಗೌರವಿಸಲಾಗುವುದು. ಐದು ಲಕ್ಷ ರೂ. ಮೊತ್ತ ಹಾಗೂ ಸ್ಮರಣಿಕೆ ನೀಡಲಾಗುವುದು.
ಅದ್ಭುತ ನಟನೆ, ಹಾಡುಗಾರಿಕೆ, ನೃತ್ಯವಷ್ಟೇ ಅಲ್ಲದೆ ಮಾನವೀಯ ಗುಣಗಳಿಂದ ಅಭಿಮಾನಿಗಳ ಮನಸ್ಸು ಗೆದ್ದ ಪುನೀತ್ ಅವರಿಗೆ ಗೌರವ ಸಲ್ಲುತ್ತಿರುವುದು ಕುಟುಂಬದವರು, ಅಭಿಮಾನಿಗಳಿಗೆ ಸಂತಸ ತಂದಿದೆ.