March 17, 2026
Tuesday, March 17, 2026
spot_img

ಪುನೀತ್‌ ರಾಜ್‌ಕುಮಾರ್‌ ಜನ್ಮದಿನ, ಅಪ್ಪು ಸಮಾಧಿಗೆ ಕುಟುಂಬದವರಿಂದ ಪೂಜೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಇಂದು ಕನ್ನಡದ ಪವರ್‌ಫುಲ್‌ ನಟ ಪುನೀತ್ ರಾಜ್​​​ಕುಮಾರ್ ಜನ್ಮದಿನ. ಈ ದಿನದಂದು ಅಪ್ಪು ಅಭಿಮಾನಿಗಳು ಸಾಮಾಜಿಕ ಜಾಲತಾಣಗಳಲ್ಲಿ ಪುನೀತ್‌ ಫೋಟೊ ಶೇರ್‌ ಮಾಡಿಕೊಂಡು ತಮ್ಮ ಪ್ರೀತಿ ವ್ಯಕ್ತಪಡಿಸಿದ್ದಾರೆ.

ಪುನೀತ್‌ ಇಂದು ನಮ್ಮ ಜೊತೆ ಇಲ್ಲ. ಆದರೆ, ಅವರ ಜನ್ಮದಿನವನ್ನು ಅಭಿಮಾನಿಗಳು ಆಚರಿಸುತ್ತಿದ್ದಾರೆ. ಇದೇ ವೇಳೆ ಕುಟುಂಬದವರು ಪುನೀತ್ ಸ್ಮಾರಕದ ಬಳಿ ತೆರಳಿ ಸಮಾಧಿಗೆ ಪೂಜೆ ಸಲ್ಲಿಸಿದ್ದಾರೆ. ಈ ಮೂಲಕ ಅಪ್ಪುನ ನೆನಪಿಸಿಕೊಳ್ಳಲಾಗಿದೆ. ಈ ವಿಡಿಯೋ ವೈರಲ್ ಆಗಿದೆ. ಫ್ಯಾನ್ಸ್ ಈ ದೃಶ್ಯವನ್ನು ನೋಡಿ ಭಾವುಕರಾಗಿದ್ದಾರೆ. ಅಪ್ಪು ಇಂದು ನಮ್ಮ ಜೊತೆ ಇರಬೇಕಿತ್ತು ಎಂಬ ಅಭಿಪ್ರಾಯ ಹೊರಹಾಕಿದ್ದಾರೆ.

ಪುನೀತ್‌ ಅಭಿಮಾನಿಗಳು ಅವರ ಹೆಸರಿನಲ್ಲಿ ಸಮಾಜಮುಖಿ ಕಾರ್ಯಗಳನ್ನು ಮಾಡುತ್ತಿದ್ದಾರೆ, ಅನ್ನದಾಸೋಕ, ರಕ್ತದಾನ ಶಿಬಿರ ಇನ್ನಿತರ ಕಾರ್ಯಕ್ರಮಗಳು ನಡೆಯುತ್ತಿವೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !