Sunday, October 1, 2023

Latest Posts

ಪುನೀತ್ ರಾಜ್ ಕುಮಾರ್ ಜನ್ಮದಿನ ಇನ್ಮುಂದೆ ‘ಸ್ಫೂರ್ತಿ ದಿನ’ವಾಗಿ ಆಚರಣೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರ ಜನ್ಮದಿನವನ್ನು ಸ್ಫೂರ್ತಿ ದಿನ ಎಂದು ಸರ್ಕಾರದ ವತಿಯಿಂದಲೇ ಆಚರಿಸಲಾಗುವುದು ಎಂದು ಸಚಿವ ಸುನಿಲ್ ಕುಮಾರ್ ಹೇಳಿದ್ದಾರೆ.

ಈ ಕುರಿತಾಗಿ ಇಂಧನ ಸಚಿವ ಸುನಿಲ್ ಕುಮಾರ್ ಅವರು ಮಾಡಿದ ಮನವಿಗೆ ಸ್ಪಂದಿಸಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, ಅಪ್ಪು ಜನ್ಮದಿನವಾದ ಮಾರ್ಚ್ 17 ಇನ್ನು ಮುಂದೆ ಸ್ಪೂರ್ತಿ ದಿನವೆಂದು ಆಚರಿಸಲು ಒಪ್ಪಿಗೆ ಸೂಚಿಸಿದ್ದಾರೆ.ಈ ಮೂಲಕ ಅಪ್ಪು ಜನ್ಮದಿನ ನಾಡಿನ ಲಕ್ಷಾಂತರ ಯುವಕರಿಗೆ ಸ್ಫೂರ್ತಿಯಾಗಲಿದೆ.

ಪುನೀತ್ ರಾಜ್ ಕುಮಾರ್ ಅವರು ಅಕಾಲಿಕವಾಗಿ ನಮ್ಮನ್ನು ಅಗಲಿದ್ದಾರೆ. ವೈಯಕ್ತಿಕವಾಗಿ ನನಗೆ ಅತ್ಯಂತ ಪ್ರೀತಿಪಾತ್ರ ವ್ಯಕ್ತಿಯಾಗಿದ್ದರು. ನಾಡಿನ ಕೋಟ್ಯಂತರ ಯುವಕರಿಗೆ ಅವರು ಸ್ಪೂರ್ತಿಯಾಗಿದ್ದರು. ಈ ಹಿನ್ನೆಲೆಯಲ್ಲಿ ಪುನೀತ್ ಜನ್ಮದಿನವನ್ನು ಸ್ಫೂರ್ತಿ ದಿನ ಎಂದು ಸರಕಾರದ ವತಿಯಿಂದಲೇ ಆಚರಣೆ ಮಾಡಲಾಗುವುದು ಎಂದು ಹೇಳಿದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!