ಹೊಸದಿಗಂತ ಡಿಜಿಟಲ್ ಡೆಸ್ಕ್:
ಇಂದು ಸಂಜೆ ಬೆಂಗಳೂರಿನ ಅರಮನೆ ಮೈದಾನದಲ್ಲಿ ಪುನೀತ ಪರ್ವ ಕಾರ್ಯಕ್ರಮ ಆಯೋಜಿಸಿದ್ದು, ಭರ್ಜರಿ ತಯಾರಿ ನಡೆದಿದೆ. ಈ ಕಾರ್ಯಕ್ರಮದಲ್ಲಿ ರಾಜ್ ಕುಟುಂಬ, ಹಿತೈಷಿಗಳು, ಕನ್ನಡ, ತಮಿಳು, ತೆಲುಗು ಹಾಗೂ ಮಲಯಾಳಂ ನಟರು ಭಾಗಿಯಾಗಿದ್ದಾರೆ. ಪುನೀತ್ ಅವರ ಪತ್ನಿ ಅಶ್ವಿನಿ ಕಾರ್ಯಕ್ರಮ ಆಯೋಜನೆ ಜವಾಬ್ದಾರಿ ಹೊತ್ತುಕೊಂಡಿದ್ದಾರೆ.
ರಾಜ್ಯದೆಲ್ಲೆಡೆಯಿಂದ ಅಭಿಮಾನಿಗಳು ಕಾರ್ಯಕ್ರಮಕ್ಕೆ ಆಗಮಿಸುತ್ತಿದ್ದು, ಅವರಿಗಾಗಿ ತಿಂಡಿ ವ್ಯವಸ್ಥೆ ಮಾಡಲಾಗಿದೆ. ಬೇರೆ ಜಿಲ್ಲೆಗಳಿಂದ ಅಭಿಮಾನಿಗಳು ಬೆಂಗಳೂರಿಗೆ ಆಗಮಿಸುತ್ತಿದ್ದು, ತಡರಾತ್ರಿವರೆಗೆ ಕಾರ್ಯಕ್ರಮ ವೀಕ್ಷಿಸಲಿದ್ದಾರೆ. ಅವರಿಗೆ ತಿಂಡಿ, ನೀರು ಹಾಗೂ ಆಸನದ ವ್ಯವಸ್ಥೆ ಮಾಡಲಾಗಿದೆ.
ಪುನೀತ ಪರ್ವ ಕಾರ್ಯಕ್ರಮಮದಲ್ಲಿ ಚಂದನವನದ ತಾರೆಯರು ಪುನೀತ್ ಹಾಡುಗಳಿಗೆ ಹೆಜ್ಜೆ ಹಾಕಲಿದ್ದಾರೆ. ಪುನೀತ್ ನಟನೆಯ ಕಡೆಯ ಡಾಕ್ಯುಮೆಂಟರಿ ಗಂಧದ ಗುಡಿ ಪ್ರಿ ರಿಲೀಸ್ ಈವೆಂಟ್ ಕೂಡಾ ಇದಾಗಿದ್ದು, ಸಿಎಂ ಬೊಮ್ಮಾಯಿ ಅವರಿಗೆ ಆಹ್ವಾನ ನೀಡಲಾಗಿದೆ. ರಾಜಕೀಯ ಗಣ್ಯರು ಸಾಕಷ್ಟು ಸಿನಿತಾರೆಯರು ಕಾರ್ಯಕ್ರಮದಲ್ಲಿ ಭಾಗಿಯಾಗುವುದರಿಂದ ಬಿಗಿ ಪೊಲೀಸ್ ಬಂದೋಬಸ್ತ್ ಇರಲಿದೆ.